ಬೆಂಗಳೂರು: ಕೃಷಿ ಇಲಾಖೆಯಲ್ಲಿ ನಡೆಯುವ ಅತ್ಯುತ್ತಮ ಕೆಲಸಗಳನ್ನು ಕಂಡು ಸಹಿಸದವರು ನನಗೆ ಮತ್ತಷ್ಟು ಹೆಸರು ಬರುವುದೆಂಬ ಭಯ ಮತ್ತು ಹತಾಶೆಯಿಂದ ಕೆಲವರು ಈ ಷಡ್ಯಂತ್ರದ ರಾಜಕಾರಣ ಹಾಗೂ ಕುತಂತ್ರ ನಡೆಸುತ್ತಿದ್ದಾರೆ. ನನ್ನ ವಿರುದ್ದದ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಮತ್ತು ಅವೆಲ್ಲವೂ ಸತ್ಯಕ್ಕೆ ದೂರವಾಗಿವೆ ಎಂದು ಕೃಷಿ ಸಚಿವ ಎನ್ ಚಲುವರಾಯ ಸ್ವಾಮಿ ಹೇಳಿಕೆಯಲ್ಲಿ ಸ್ಪಷ್ಟ ಪಡಿಸಿದ್ದಾರೆ.
ಕೃಷಿ ಪ್ರಧಾನ ದೇಶವಾಗಿರುವ ಮಹತ್ವದ ಕ್ಷೇತ್ರದಲ್ಲಿ ಒಂದಷ್ಟು ಸೇವೆ ಮಾಡುವ ಅವಕಾಶ ನನಗೆ ದೊರೆತಿದೆ. ನಾನೂ ಸಹ ಕೃಷಿಕ ಕುಟುಂಬದಿಂದಲೇ ಬಂದವನು.
ಕರ್ನಾಟಕದ ರೈತರಿಗೆ ಕೃಷಿ ಮಂತ್ರಿಯಾಗಿ ಏನೆಲ್ಲಾ ಸೇವೆ ಮಾಡಲು ಸಾಧ್ಯವಿದೆಯೋ ಆ ಎಲ್ಲಾ ಸೇವೆ ಸಲ್ಲಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದಿದ್ದಾರೆ.
ರಾಜ್ಯದ ಜನ ನನ್ನನ್ನು ಬೆಂಬಲಿಸಿ, ಆಶೀರ್ವದಿಸುವ ರೀತಿ ಕಂಡು ಹೊಟ್ಟೆ ಉರಿದುಕೊಳ್ಳುವ ಕೆಲವು ಜನ
ನನ್ನನ್ನು ರಾಜಕೀಯವಾಗಿ ತುಳಿಯುವ ಉದ್ದೇಶದಿಂದ ಬಹಳ ವ್ಯವಸ್ಥಿತವಾಗಿ ಷಡ್ಯಂತ್ರ ಮತ್ತು ಪಿತೂರಿ ನಡೆಸುತ್ತಿದ್ದಾರೆ ಎಂದಿದ್ದಾರೆ.
ನನ್ನನ್ನೇ ಗುರಿಯಾಗಿಸಿಕೊಂಡು ನಡೆಯುತ್ತಿರುವ ಈ ಕುತಂತ್ರದ ಹಿಂದೆ ಯಾರಿರಬಹುದು ಎನ್ನುವ ಬಗ್ಗೆ ಹೆಸರು ಹೇಳುವ ಅವಶ್ಯಕತೆಯಿಲ್ಲ. ಜನರು ರಾಜಕೀಯವಾಗಿ ಪ್ರಬುದ್ಧರಿದ್ದು ನನ್ನ ವಿರುದ್ಧ ಷಡ್ಯಂತ್ರ ರೂಪಿಸುತ್ತಿರುವುದು ಯಾರೆಂದು ಅವರೇ ನಿರ್ಧಾರ ಮಾಡುತ್ತಾರೆ ಎಂದು ಹೇಳಿದ್ದಾರೆ,
ಸರ್ಕಾರಗಳ ಬದಲಾವಣೆ ಆದಾಗ ಸರ್ಕಾರಿ ನೌಕರರ ವರ್ಗಾವಣೆ ಒಂದು ಸಾಮಾನ್ಯ ಪ್ರಕ್ರಿಯೆ. ಇದು ಎಲ್ಲಾ ಹೊಸ ಸರ್ಕಾರಗಳು ಬಂದಾಗಲೂ ಸಹಜವಾಗಿ ನಡೆದಿವೆ. ಆದರೆ ವೈಯಕ್ತಿಕವಾಗಿ ನಾನು ಮೊದಲಿನಿಂದಲೂ ಈ ಪ್ರಕ್ರಿಯೆಯಲ್ಲಿ ಈ ಬಗ್ಗೆ ಹೆಚ್ಚಿನ ಗಮನ ಕೊಟ್ಟಿಲ್ಲ.
ನನ್ನ ಬಗ್ಗೆ ಬಹಳ ದ್ವೇಷ ಹೊಂದಿರುವ ಜನ ಹೇಗಾದರೂ ಸರಿ ನನ್ನ ವ್ಯಕ್ತಿತ್ವಕ್ಕೆ ಕಪ್ಪು ಚುಕ್ಕೆ ತರುವ ಪ್ರಯತ್ನದ ಭಾಗವಾಗಿ ನಕಲಿ ಪತ್ರಗಳನ್ನು ಸೃಷ್ಟಿಸಿ ಸದರಿ ನಕಲಿ ಪತ್ರಗಳ ಆಧಾರದ ಮೇಲೆ ನೌಕರರನ್ನು ನೆಪವಾಗಿಸಿ ಷಡ್ಯಂತ್ರ ರೂಪಿಸುತ್ತಿದ್ದಾರೆ.
ಈ ಷಡ್ಯಂತ್ರದ ಹಿಂದಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.ಆಪ್ತರೊಂದಿಗೆ ಮಲೇಷ್ಯಾಕ್ಕೆ ಹಾರಿದ HDK: ಕುತೂಹಲ ಮೂಡಿಸಿದ ವಿದೇಶಿ ಪ್ರವಾಸ
ಈಗಾಗಲೇ ರಾಜ್ಯದ ಜನತೆಗೆ ನನ್ನ ವಿರುದ್ಧ ಯಾರೆಲ್ಲ ಏನೇನು ರಾಜಕೀಯ ಮಸಲತ್ತು ನಡೆಸಿದ್ದಾರೆಂದು ತಿಳಿದಿದೆ. ಇದು ಸಹ ಅಂತಹುದೇ ಮುಂದುವರಿದ ಭಾಗ ಅಷ್ಟೇ. ನೇರವಾಗಿ ನನ್ನನ್ನು ಎದುರಿಸಲಾಗದೆ ನನ್ನ ವಿರುದ್ಧ ಈ ರೀತಿಯ ಕ್ಷುಲ್ಲಕ ರಾಜಕೀಯ ಮಾಡಲಾಗುತ್ತಿದೆ ಎಂದಿದ್ದಾರೆ.
- ₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
- ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
- 2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ
- KPSC ಮೂಲಕ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
- 1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು
- ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಕೆರೆಗೆ ಉರುಳಿದ ಕಾರು : ಇಬ್ಬರ ಸಾವು
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ