January 3, 2025

Newsnap Kannada

The World at your finger tips!

kingfisher

ಮೈಸೂರಿನಲ್ಲಿ 25 ಕೋಟಿ ಮೌಲ್ಯದ ಕಿಂಗ್ ಫಿಶರ್ ಮದ್ಯ ವಶ : ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆ

Spread the love

ಮೈಸೂರು : ಯುವಜನರಲ್ಲಿ ಅತ್ಯಂತ ಜನಪ್ರಿಯವಾದ ಬಿಯರ್ ಕಿಂಗ್ ಫಿಶರ್ ಬಿಯರ್‌ನಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ.

ಈ ಕಾರಣದಿಂದ ಮೈಸೂರು ಅಬಕಾರಿ ಪೊಲೀಸರು 25 ಕೋಟಿ ಮೌಲ್ಯದ 78,678 ಬಾಕ್ಸ್ ಬಿಯರ್ ವಶಪಡಿಸಿಕೊಂಡು ಪ್ರಕರಣ ದಾಖಲೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ನಂಜನಗೂಡಿನಲ್ಲಿರುವ ಯುನೈಟೆಡ್ ಬ್ರಿವರಿಸ್ ಕಂಪನಿ ತಯಾರಿಸಿದ್ದ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದ್ದು , ಕಿಂಗ್ ಫಿಷರ್ ಸ್ಟ್ರಾಂಗ್ ಹಾಗೂ ಕಿಂಗ್ ಫಿಷರ್ ಅಲ್ಟ್ರಾ ಲ್ಯಾಗರ್ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಪತ್ತೆಯಾಗಿದೆ.

ಈ ಸೆಡಿಮೆಂಟ್ ಅಂಶ ದಿನಾಂಕ 15-07-23ರಂದು ಬಾಟಿಲಿಂಗ್ ಆದ ಬಿಯರ್‌ನಲ್ಲಿ ಕಂಡುಬಂದಿದೆ.

ಈ ಕುರಿತು ಮಾಹಿತಿ ತಿಳಿದ ಕೂಡಲೇ ಬಿಯರ್ ಸ್ಯಾಂಪಲ್ ಅನ್ನು ಕೆಮಿಕಲ್ ಲ್ಯಾಬ್‌ಗೆ ಕಳುಹಿಸಿ , 2-08-2023 ರಂದು ಕೆಮಿಕಲ್ ವರದಿ ಬಂದಿದ್ದು, ವರದಿಯಲ್ಲಿ ಅನ್ ಫಿಟ್ ಫಾರ್ ಹ್ಯುಮನ್ ಕನ್ಸಂಪ್ಷನ್ ಅಂದರೆ ಮಾನವರ ಸೇವನೆಗೆ ಯೋಗ್ಯವಲ್ಲ ಎಂದು ಕಂಡುಬಂದಿದೆ.

ಕೆಲ ಡಿಪೋದಿಂದ ಅಂಗಡಿಗಳಿಗೂ ವಿತರಣೆಯಾಗಿದ್ದು , ರಿಟೈಲ್‌ನಲ್ಲೂ ಸೇಲ್ ಆಗದಂತೆ ತಡೆಹಿಡಿಯಲಾಗಿದೆ ಮತ್ತು ಕಂಪನಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಇ-ಬಸ್ ಸೇವೆ’ಗೆ ಮೋದಿಯಿಂದ ಗ್ರೀನ್ ಸಿಗ್ನಲ್ – 10 ಸಾವಿರ ‘ಎಲೆಕ್ಟ್ರಿಕ್ ಬಸ್’ ರಸ್ತೆಗಿಳಿಯಲಿದೆ

ಈ ಬಿಯರ್ ಮನುಷ್ಯರು ಕುಡಿಯಲು ಯೋಗ್ಯವಲ್ಲ ಎಂದು ಇನ್ ಹೌಸ್ ಕೆಮಿಸ್ಟ್ ವರದಿ ನೀಡಿದ್ದು , ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತ ಎ.ರವಿಶಂಕರ್ ನೀಡಿದರು.

Copyright © All rights reserved Newsnap | Newsever by AF themes.
error: Content is protected !!