ಸ್ಯಾಂಡಲ್ ವುಡ್ ನಟ ಮತ್ತು ನಿಖಿಲ್ ಕುಮಾರ್ ಸ್ವಾಮಿ ಮತ್ತೆ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಸೀತಾರಾಮ ಕಲ್ಯಾಣ ಸಿನಿಮಾ ಮೂಲಕ ಕೊನೆಯದಾಗಿ ಅಭಿಮಾನಿಗಳ ಮುಂದೆ ಬಂದಿದ್ದ ನಿಖಿಲ್ ಇದೀಗ ಲವರ್ ಬಾಯ್ ಆಗಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.
ಸೀತಾರಾಮ ಕಲ್ಯಾಣ ಸಿನಿಮಾ ಬಳಿಕ ಕೊಂಚ ಗ್ಯಾಪ್ ಪಡೆದಿದ್ದ ನಿಖಿಲ್, ರಾಜಕೀಯದಲ್ಲಿ ಬ್ಯುಸಿಯಾಗಿದ್ದರು. ಇದೀಗ ಮತ್ತೆ ಸಿನಿಮಾಗೆ ವಾಪಸ್ ಆಗಿರುವ ನಿಖಿಲ್ ‘ರೈಡರ್’ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ನಿನ್ನೆ ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈಗಾಗಲೇ ಸಿನಿಮಾದಿಂದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ನಿಖಿಲ್ ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದರು.
ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ನಿಖಿಲ್ ಕಾಲೇಜು ಯುವಕನಾಗಿ ಎಲ್ಲರ ಮನಸ್ಸು ಕದ್ದಿದ್ದಾರೆ. ಈಗಾಗಲೇ ರೈಡರ್ ಸಿನಿಮಾದ ಶೂಟಿಂಗ್ ಪ್ರಾರಂಭವಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ಹೇಳಲಾಗುತ್ತಿದೆ. ಕೋವಿಡ್-19 ಕಾರಣದಿಂದ ಚಿತ್ರೀಕರಣ ವಿಳಂಬವಾಗಿದ್ದು, ಮುಂದಿನ ಹಂತದ ಚಿತ್ರೀಕರಣಕ್ಕೆ ಸಿದ್ಧತೆ ನಡೆಯುತ್ತಿದೆ.
ಅಂದ್ಹಾಗೆ ರೈಡರ್ ಚಿತ್ರಕ್ಕೆ ತೆಲುಗು ನಿರ್ದೇಶಕ ವಿಜಯ್ ಕುಮಾರ್ ಕೊಂಡ ಆಕ್ಷನ್ ಕಟ್ ಹೇಳುತ್ತಿದ್ದಾರೆ. ರೈಡರ್ ಒಂದು ನಿಜ ಜೀವನದಿಂದ ಸ್ಫೂರ್ತಿಗೊಂಡ ಕಥೆ ಎಂದು ಹೇಳಲಾಗುತ್ತಿದೆ. ಚಿತ್ರದಲ್ಲಿ ಚಿಕ್ಕಣ್ಣ, ದತ್ತಣ್ಣ, ಶಿವರಾಜ್ ಕೆ ಆರ್ ಪೇಟೆ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು