ನವದೆಹಲಿ : ಆಮ್ ಆದ್ಮಿ ಪಕ್ಷವು ಅರವಿಂದ ಕೇಜ್ರಿವಾಲ್ ಅವರು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ಬುಧವಾರ ಪ್ರಸ್ತಾಪಿಸಿದೆ.
ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ ಇಡೀ ದೇಶಕ್ಕೆ ಮಾದರಿ ಆಡಳಿತ ಮತ್ತು ಜನೋಪಯೋಗಿ ಯೋಜನೆಗಳನ್ನು ನೀಡಿದ್ದಾರೆ ಎಂದು ಹೇಳಿದೆ.
ಪಕ್ಷದ ಮುಖ್ಯ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಮಾತನಾಡಿ, ಕೇಜ್ರಿವಾಲ್ ಯಾವಾಗಲೂ ‘ಲಾಭದಾಯಕ ಮತ್ತು ಜನಪರ’ ಬಜೆಟ್ ಅನ್ನು ಮಂಡಿಸಿದ್ದಾರೆ.
ಇಂಡಿಯಾ ಮೈತ್ರಿಕೂಟದ ಸಭೆಯು ನಾಳೆ ಮುಂಬೈನಲ್ಲಿ ನಡೆಯುವುದರಿಂದ ಅಲ್ಲಿ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಎದುರಿಸಲು ಮತ್ತು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ವಿರೋಧ ಪಕ್ಷದ ನಾಯಕರು ಜಂಟಿ ಪ್ರಚಾರ ತಂತ್ರವನ್ನು ರೂಪಿಸುವ ನಿರೀಕ್ಷೆಯಿದೆ
ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಕಕ್ಕರ್, ‘ವಕ್ತಾರೆಯಾಗಿ ನಾನು ನಮ್ಮ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ಹೆಸರನ್ನು ಪ್ರಸ್ತಾಪಿಸುತ್ತೇನೆ. ಕೇಜ್ರಿವಾಲ್ ನಿರಂತರವಾಗಿ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ ಮತ್ತು ಮಾದರಿ ಆಡಳಿತ ನೀಡಿದ್ದಾರೆ. ಇದು ದೆಹಲಿಯಲ್ಲಿ ಕನಿಷ್ಠ ಹಣದುಬ್ಬರಕ್ಕೆ ಕಾರಣವಾಯಿತು’ ಎಂದು ಅವರು ಹೇಳಿದರು.ಯುವ ನಿಧಿ’ ಯೋಜನೆ ಡಿಸೆಂಬರ್/ಜನವರಿಯಲ್ಲಿ ಜಾರಿ: ಸಿಎಂ ಸಿದ್ದು
ಎಲ್ಲಾ ವರ್ಗದ ಜನರಿಗೆ ಅನುಕೂಲವಾಗುವಂತಹ ಮಾದರಿಯನ್ನು ದೇಶಕ್ಕೆ ನೀಡಿದ್ದಾರೆ. ಹೀಗಾಗಿ, ಅವರೇ ಪ್ರಧಾನಿ ಅಭ್ಯರ್ಥಿ ಆಗಬೇಕೆಂದು ನಾನು ಬಯಸುತ್ತೇನೆ. ಆದರೆ, ನಿರ್ಧಾರ ನನ್ನ ಕೈಯಲ್ಲಿಲ್ಲ’ ಎಂದಿದ್ದಾರೆ
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ