December 19, 2024

Newsnap Kannada

The World at your finger tips!

government , job , India

KPSCಯಿಂದ ‘ವಾಣಿಜ್ಯ ತೆರಿಗೆ ಪರಿವೀಕ್ಷಕ’ರ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವಂತ ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೆಪಿಎಸ್ಸಿಯಿಂದ ಅಧಿಸೂಚನೆ ಹೊರಡಿಸಿ, ವಾಣಿಜ್ಯ ತೆರಿಗೆಗಳ ಇಲಾಖೆಯ ಗ್ರೂಪ್-ಸಿ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರ 230 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿರೋದಾಗಿ ತಿಳಿಸಿದೆ.

ಒಟ್ಟು ಹುದ್ದೆಗಳ ಸಂಖ್ಯೆ – 230.

ಅರ್ಜಿ ಸಲ್ಲಿಕೆ ವಿಧಾನ

ಈ ಹುದ್ದೆಗಳಿಗೆ ಅರ್ಜಿಯನ್ನು ಆನ್ ಲೈನ್ ಮೂಲಕವೇ ಸಲ್ಲಿಸಬೇಕಾಗಿದೆ.

ಅರ್ಹ ಅಭ್ಯರ್ಥಿಗಳು https://kpsconline.karnataka.gov.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು

230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ 01-09-2023ರಿಂದ ಆರಂಭಗೊಂಡಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30-09-2023 ಆಗಿರುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆ ವಿವರ

  • ತಾತ್ಕಾಲಿಕ ಸ್ಪರ್ಧಾತ್ಮಕ ಪರೀಕ್ಷೆಯ ದಿನಾಂಕ ಕನ್ನಡ ಭಾಷಾ ಪರೀಕ್ಷೆದೆ
  • 04-11-2023, ಸ್ಪರ್ಧಾತ್ಮಕ ಪರೀಕ್ಷೆ 05-11-2023ರಂದು ನಡೆಸೋದಕ್ಕೆ ನಿಗದಿ ಪಡಿಸಲಾಗಿದೆ.

ಅರ್ಜಿ ಶುಲ್ಕ

  • ಸಾಮಾನ್ಯ ಅಭ್ಯರ್ಥಿಗಳಿಗೆ ರೂ.600, ಇತರೆ ವರ್ಗದವರಿಗೆ ರೂ.300, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50, ಪರಿಶಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ

  • ಅರ್ಥಶಾಸ್ತ್ರ, ಗಣಿತ ಒಂದು ವಿಷಯವನ್ನು ಒಳಗೊಂಡಂತೆ ಪದವಿ. ಅಥವಾ ಬಿಕಾಂ ತೇರ್ಗಡೆಯಾಗಿರಬೇಕು.
  • ಎಕನಾಮಿಕ್ಸ್, ಮ್ಯಾಥಮೆಟಿಕಲ್, ಕಾಮರ್ಸ್ ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯವನ್ನು ಅಭ್ಯರ್ಥಿಗಳು ಅವರು ಹೊಂದಿರುವ ವಿದ್ಯಾರ್ಹತೆಯಲ್ಲಿ ಕನಿಷ್ಠ ಯಾವುದೇ ಒಂದು ಸೆಮಿಸ್ಟರ್, ಒಂದು ವರ್ಷದಲ್ಲಿ ವ್ಯಾಸಂಗ ಮಾಡಿದ್ದಲ್ಲಿ, ಸದರಿ ಪದವಿಗಳನ್ನು ಸಹ ಪರಿಗಣಿಸಲಾಗುವುದು.

ವಯೋಮಿತಿ- ಕನಿಷ್ಠ 18 ವರ್ಷ, ಗರಿಷ್ಟ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಎಸ್ಸಿ, ಎಸ್ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ.ನಂಗೆ 5 ಬಾರಿ ಮರುಜನ್ಮ – ನನ್ನ ಜೀವನದ ಬಗ್ಗೆ ಕನಿಕರವಿರಲಿ : ಹೆಚ್‌ಡಿಕೆ

ವೇತನ ಶ್ರೇಣಿ

  • ರೂ.33,450ರಿಂದ 62,600 ಆಗಿರುತ್ತದೆ.
Copyright © All rights reserved Newsnap | Newsever by AF themes.
error: Content is protected !!