ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿ ಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದೆ. ಸಕಲಾದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದರು
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಪ್ರಶ್ನೆಗೆ ಉತ್ತರಿಸಿದ ಅವರು, ‘ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ’ ಎಂದರು. ಮೈಸೂರಿನಲ್ಲಿ ಸೆ.15ರಂದು ಸಂವಿಧಾನ ಓದು ಕಾರ್ಯಕ್ರಮ – ಡಿಸಿ ಡಾ ಕೆ.ವಿ.ರಾಜೇಂದ್ರ
ಹರಿಪ್ರಸಾದ್ ಅವರಿಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಆತ್ಮೀಯರು. ಹೀಗಿರುವಾಗ ಅವರು ಎಲ್ಲಾ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ ಎಂದು ಅವರು ಪ್ರತಿಪಾದಿಸಿದರು.
ಕಾಂಗ್ರೆಸ್ಸಿನಲ್ಲಿ ಯಾವ ಅಂತಃಕಲಹವೂ ಇಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.
ಸಿಎಂ ಸಿದ್ದು ವಿರುದ್ಧ ಹರಿಪ್ರಸಾದ್ ಹೇಳಿಕೆ ಬಗ್ಗೆ ಪಕ್ಷ ನಿಗಾ : ಸಚಿವ ಎಂ ಬಿ ಪಾಟೀಲ – Party watch over Hariprasad’s statement against CM Siddu: Minister MB Patil
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು