ಪ್ರತಾಪ್ ಸಿಂಹ ಒಬ್ಬ ಸಂಸದನಾಗಿ ಹೇಳಿಕೆ ಕೊಟ್ಟಿಲ್ಲ. ಸಂಸದರ ರೀತಿ ಮಾತನಾಡಿದ್ದರೆ ನಾನು ಉತ್ತರ ಕೊಡುತ್ತಿದ್ದೆ. ಆತ ಪೇಟೆ ರೌಡಿ ರೀತಿ ಹೇಳಿಕೆ ಕೊಟ್ಟರೆ ನಾನು ಉತ್ತರ ಕೊಡಲ್ಲ. ಚುನಾವಣೆ ಸಮಯದಲ್ಲಿ ನಾನು ಇಂತಹ ಹೇಳಿಕೆಗಳನ್ನು ಎದುರಿಸಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಅಂಬರೀಶ್ ಇರುವವರೆಗೂ ಯಾರಿಗೂ ಮಾತನಾಡುವ ಧೈರ್ಯ ಇರಲಿಲ್ಲ. ಅವರು ಹೋದ ಬಳಿಕ ಇಂತಹ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಒಬ್ಬ ಸಂಸದರು ಬಂದಾಗ ಸ್ವತಃ ಜನ ಹೇಳ್ತಾರೆ. ಕೆ.ಆರ್ ನಗರ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಬರುತ್ತೆ. ಮೈಸೂರಿಗೆ ಹೋದಾಗ ನನ್ನ ಬಳಿಯೂ ಜನ ಬಂದು ಹೇಳುತ್ತಾರೆ. ಇದು ಸರ್ವೇ ಸಾಮಾನ್ಯ. ಇದನ್ನು ಈ ರೀತಿ ಪ್ರಚಾರ ಮಾಡುವುದು ಸರಿಯಲ್ಲ. ನನಗೂ ಅಲ್ಲಿಯ ಜನ ರಸ್ತೆ ಸರಿಯಿಲ್ಲ, ಚರಂಡಿ ಇಲ್ಲ ಅಂತ ಹೇಳಿದ್ದಾರೆ. ಆದರೆ ನಾನು ಸಂಸದರ ಬಗ್ಗೆ ಎಂದೂ ಮಾತನಾಡಿಲ್ಲ. ಜನ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಉತ್ತರ ಕೊಡುತ್ತಿದ್ದಾರೆ. ಇದನ್ನು ಅರ್ಥ ಮಾಡಿಕೊಂಡು ಪ್ರತಾಪಸಿಂಹ ಹೇಳಿಕೆ ಕೊಡಲಿ ಎಂದು ಹೇಳಿದ್ದಾರೆ.
ಇತ್ತೀಚೆಗೆ ಫೋನ್ನಲ್ಲಿ ಸಂಸದ ಪ್ರತಾಪ್ ಸಿಂಹ ಅಧಿಕಾರಿಯೊಂದಿಗೆ ಮಾತನಾಡುತ್ತಾ, ಸುಮಲತಾ ವಿರುದ್ಧ ಲಘುವಾಗಿ ಮಾತನಾಡಿದ್ದರು. ಆ ಯಮ್ಮ ಕೆಲಸ ಮಾಡುವುದಿಲ್ಲ. ಮಂಡ್ಯದ ಯಾವುದೇ ಕೆಲಸ ಇದ್ದರೆ ನನ್ನ ಬಳಿ ಬನ್ನಿ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. ಆ ಹೇಳಿಕೆ ಸಂಬಂಧ ಇಂದು ಸುಮಲತಾ ತಿರುಗೇಟು ನೀಡಿದ್ದಾರೆ.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು