ಜೈಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನವಯುಗದ ರಾವಣ ಎಂದುಬಿಂಬಿಸುವಂತೆ ಸಾಮಾಜಿಕ ಜಾಣತಾಣದಲ್ಲಿ ಹಾಕಿದ್ದ ಪೋಸ್ಟರ್ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಪಕ್ಷದ ಐಟಿ ಸೆಲ್ ಉಸ್ತುವಾರಿ ಅಮಿತ್ ಮಾಳವಿಯಾ ವಿರುದ್ಧ ಕಾಂಗ್ರೆಸ್ ನಾಯಕರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 499 (ಇನ್ನೊಬ್ಬ ವ್ಯಕ್ತಿಯ ವಿರುದ್ಧ ಸುಳ್ಳು ಆರೋಪ), 500 (ಮಾನನಷ್ಟ), 504 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ರಾಜಸ್ಥಾನ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಜಸ್ವಂತ್ ಗುರ್ಜರ್ ಜೈಪುರ ಮೆಟ್ರೋಪಾಲಿಟನ್ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಅಕ್ಟೋಬರ್ 9ರಂದು ವಾದ ಆಲಿಸಲು ನ್ಯಾಯಾಲಯ ನಿರ್ಧರಿಸಿದೆ. ಬಿಜೆಪಿಯ ಅಧಿಕೃತ ಎಕ್ಸ್ ಖಾತೆಯಲ್ಲಿ ರಾವಣನಂತೆ ಬಿಂಬಿಸುವ ಗಾಂಧಿ ಫೆÇೀಟೋ ಹಾಕಲಾಗಿತ್ತು. ಯುದ್ಧ ಸಾರಿದ ಇಸ್ರೇಲ್
ಕಾಂಗ್ರೆಸ್‍ನಿಂದ ತೀವ್ರ ಟೀಕೆಗೆ ಕಾರಣವಾಗಿದೆ. ಕಾಂಗ್ರೆಸ್ ಮತ್ತು ಅದಕ್ಕೆ ಸಂಬಂಧಿಸಿದ ಜನರ ಅಭಿಮಾನವನ್ನು ಅವಮಾನಿಸುವುದು ಮತ್ತು ಹಾನಿ ಮಾಡುವುದು ಮತ್ತು ರಾಜಕೀಯ ಲಾಭ ಗಳಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ