ಹೊಸಪೇಟೆ : ಎರಡು ಟಿಪ್ಪರ್ ಮತ್ತು ಕ್ರೂಸರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಸಪೇಟೆ ಹೊರವಲಯದಲ್ಲಿ ಸೋಮವಾರ ನಡೆದಿದೆ.
ಭೀಮಲಿಂಗ, ಕೆಂಚವ್ವ, ಉಮಾ, ಭಾಗ್ಯ, ಗೋಣಿಬಸಪ್ಪ, ಅನಿಲ್ ಮತ್ತು ಯುವರಾಜ ಎಂಬುವವರು ಸಾವನ್ನಪ್ಪಿದ್ದಾರೆ.
ಟಿಪ್ಪರ್ ಆಕ್ಸಲ್ ಕಟ್ ಆಗಿ ಭೀಕರ ದುರಂತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಹೊಸಪೇಟೆ ನಗರದ ಹೊರವಲಯದ ಸುರಂಗದ ಬಳಿ ಎರಡು ಮೈನಿಂಗ್ ಟಿಪ್ಪರ್ ಲಾರಿಗಳು ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡೆಯಬೇಕಾಯಿತು.ಕಾವೇರಿ ನೀರು ಬಿಡುವಂತೆ ತ.ನಾಡು ವಿಧಾನಸಭೆ ನಿರ್ಣಯ
ಅಪಘಾತದಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ