ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ. ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅತ್ತಿಬೆಲೆ ಪಟಾಕಿ ದುರಂತಕ್ಕೆ ಸಂಬಂಧಿಸಿದಂತೆ ಸರ್ಕಾರ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಕಾರ್ಯಕ್ರಮಗಳು, ಗಣೇಶ ಹಬ್ಬ ಹಾಗೂ ಮದುವೆ ಸಂದರ್ಭದಲ್ಲಿ ಪಟಾಕಿಗಳನ್ನು ಬ್ಯಾನ್ ಮಾಡುವುದಾಗಿ ತಿಳಿಸಿದರು.
ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಪಟಾಕಿ ಮಾರಾಟ ಪರವಾನಗಿ ನಿಯಮದಲ್ಲಿ ಬದಲಾವಣೆ
ಪಟಾಕಿ ಮಾರಾಟ ಪರವಾನಗಿ ನಿಯಮದಲ್ಲಿ ಬದಲಾವಣೆ ಮಾಡಲಾಗಿದೆ.ಪಿತೃ ಪಕ್ಷ : ಕಾಗೆಗಳಿಗೆ ವಿಶೇಷ ಸ್ಥಾನ
ಒಮ್ಮೆ ಪರವಾನಗಿ ಪಡೆದರೆ 5 ವರ್ಷದ ಬಳಿಕ ನವೀಕರಣಕ್ಕೆ ಅವಕಾಶವಿತ್ತು. ಇನ್ಮುಂದೆ ಪ್ರತಿವರ್ಷ ಪಟಾಕಿ ಮಾರಾಟ ಪರವಾನಗಿ ನವೀಕರಣಗೊಳಿಸಬೇಕು. ಆದೇಶ ಪಾಲನೆ ಮಾಡದಿದ್ದರೆ ಕಠಿಣ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ಕೊಟ್ಟಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ