ಬೆಂಗಳೂರು: ರಾಜ್ಯ ಸರ್ಕಾರ 6 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಮುನೀಶ್ ಮುದ್ಗಿಲ್, ಐಎಎಸ್ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಆಡಳಿತ ಸುಧಾರಣೆ), ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಮುಂದಿನ ಆದೇಶದವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ವಿಶೇಷ ಆಯುಕ್ತ (ಕಂದಾಯ) ಆಗಿ ನೇಮಿಸಲಾಗಿದೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಬೆಂಗಳೂರು ಕಾರ್ಯನಿರ್ವಾಹಕ ನಿರ್ದೇಶಕಿ ವಿನೋತ್ ಪ್ರಿಯಾ ಆರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ (ದಕ್ಷಿಣ) ನೇಮಿಸಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ನಿರ್ದೇಶಕಿ (ಐಟಿ) ಸ್ನೇಹಲ್.ಆರ್., ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ (ಪೂರ್ವ) ನೇಮಿಸಲಾಗಿದೆ.
ಬೆಂಗಳೂರಿನ ಹಣಕಾಸು ನೀತಿ ಸಂಸ್ಥೆಯ ಹೆಚ್ಚುವರಿ ನಿರ್ದೇಶಕಿ ಶ್ರೀವಿದ್ಯಾ ಪಿ.ಐ.,ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಮಿಷನ್ ನಿರ್ದೇಶಕರಾಗಿ ನಿಯೋಜಿಸಲಾಗಿದೆ.
ಬೆಂಗಳೂರಿನ ರಾಷ್ಟ್ರೀಯ ಜೀವನೋಪಾಯ ಮಿಷನ್ (ಎನ್‌ಎಲ್‌ಎಂ) ಮಿಷನ್ ನಿರ್ದೇಶಕಿ ಡಾ.ರಾಗಪ್ರಿಯ ಆರ್.,ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಉದ್ಯೋಗ ಮತ್ತು ತರಬೇತಿ ಆಯುಕ್ತರಾಗಿ ನೇಮಿಸಲಾಗಿದೆ.ಚಂದ್ರ ಗ್ರಹಣ – ಚಾಮುಂಡಿ ದೇವಿ ದರ್ಶನಕ್ಕೆ ನಾಳೆ ಸಂಜೆ 6 ಗಂಟೆಯಿಂದ ನಿರ್ಬಂಧ
ಜ್ಯೋತಿ ಕೆ.,ಆಯುಕ್ತರು, ಉದ್ಯೋಗ ಮತ್ತು ತರಬೇತಿ, ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾಗಿ ನಿಯೋಜಿಸಿದೆ.
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ