ಕಾಲುವೆಗೆ ಇಳಿದಿದ್ದ ವೈದ್ಯಕೀಯ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ. ಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದ ಬಳಿ ನಡೆದಿದೆ.
ಬೆಂಗಳೂರಿನ ನಿವಾಸಿ ಶೈಲೇಂದ್ರ ಎಂಬುವರ ಪುತ್ರ ಕಿಶನ್ (21) ಮೃತ ವ್ಯಕ್ತಿ. ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ. ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ತರಬೇತಿಗಾಗಿ ಐವರು ವಿದ್ಯಾರ್ಥಿಗಳು ಆಗಮಿಸಿದ್ದರು.
ಬೀಚನಹಳ್ಳಿ ಎಡದಂಡೆ ನಾಲೆಗೆ ನೀರಿನಲ್ಲಿ ಈಜಲು ತೆರಳಿದ್ದಾರೆ. ಈ ವೇಳೆ ಈಜಲು ಬಾರದ ಕಿಶನ್ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನೀರಲ್ಲಿ ಮುಳುಗಿ ಸಾಯುತ್ತಿದ್ದ ಕಿಶನ್ ಅನ್ನು ಸ್ನೇಹಿತರು ಮೇಲೆತ್ತಲು ಪ್ರಯತ್ನಿಸಿದರಾದರೂ ಮೇಲುತ್ತುವ ವೇಳೆಗಾಗಲೇ ಕಿಶನ್ ಸಾವನ್ನಪ್ಪಿದ್ದಾನೆ.
ಮೃತ ದೇಹವನ್ನು ಸರಗೂರಿನ ಆಸ್ಪತ್ರೆಗೆ ರವಾನಿಸಲಾಯಿತು.ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು