ಮಂಡ್ಯ :
ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿ ಇಂಜಿನಿಯರ್ ಗಳ ಮನೆಗಳಲ್ಲಿ ದಾಖಲಾತಿ ಪರಿಶೀಲನೆ ಕೈಗೊಂಡಿದ್ದಾರೆ.
ಮಳವಳ್ಳಿ ಮತ್ತು ಮದ್ದೂರು ತಾಲೂಕಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದಾರೆ.
ಮೈಸೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿ ಇಂಜಿನಿಯರ್ ಬಾಲರಾಜು ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ರವರ ಮನೆಗಳಲ್ಲಿ ಶೋಧ ನಡೆಸಿದರು.
ಇಂಜಿನಿಯರ್ ಬಾಲರಾಜು ಮಳವಳ್ಳಿ ತಾಲೂಕಿನ ನಂಜೇಗೌಡನ ದೊಡ್ಡಿಯ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿ ಸುಚಿತ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲಾತಿ ಪರಿಶೀಲಿಸಿದರು.
ಮದ್ದೂರು ತಾಲೂಕಿನ ತೈಲೂರು ಗ್ರಾಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು