ಡ್ರೋನ್ ಮೂಲಕ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ  : ಸಚಿವ ಈಶ್ವರ್ ಖಂಡ್ರೆ

Team Newsnap
1 Min Read

ಬೆಂಗಳೂರಿನ ಕೂಡ್ಲು ಗೇಟ್ ಬಳಿ ಚಿರತೆ ಕಾಣಿಸಿಕೊಂಡ ವಿಚಾರವಾಗಿ ಬೆಂಗಳೂರಿನಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಈ ಕುರಿತು ಮಾತನಾಡಿ ಚಿರತೆ ಸೆರೆ ಹಿಡಿಯಲು ಆಧುನಿಕ ತಂತ್ರಜ್ಞಾನ ಬಳಕೆಯನ್ನು ಮಾಡಿದ್ದಾರೆ ಆ ಮೂಲಕ ಚಿರತೆ ಸೆರೆಹಿಡಿಯಲಾಗುತ್ತದೆ ಎಂದು ತಿಳಿಸಿದರು.

ಚಿರತೆಯನ್ನು ಸೆರೆ ಹಿಡಿಯಲು ಡ್ರೋನ್ ಮೂಲಕ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಮಾಡಲಾಗುತ್ತಿದೆ. ಅದೇ ರೀತಿ ಥರ್ಮಲ್ ಕ್ಯಾಮರಾ ಮೂಲಕ ಚಿರತೆ ಸೆರೆ ಹಿಡಿಯುವ ಕೆಲಸ ನಡೆಯುತ್ತಿದೆ ಎಂದು ಖಂಡ್ರೆ ತಿಳಿಸಿದರು.

ಚಿರತೆ ಪ್ರತ್ಯಕ್ಷ ಹಿನ್ನೆಲೆ ಆ ಭಾಗದ ಜನರು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಯಾವುದೇ ರೀತಿಯಾಗಿ ಆತಂಕ ಭಯ ಬೇಡ ಆದರೆ ಎಚ್ಚರಿಕೆಯಿಂದ ಇರಲಿ. ಈ ಚಿರತೆ ಎಲ್ಲಿಂದ ಬಂದಿದ್ದು ಎಂಬ ನಿಖರ ಮಾಹಿತಿ ಇಲ್ಲ ಎಂದು ಬೆಂಗಳೂರಿನಲ್ಲಿ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ನಿನ್ನೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿದೆ. ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಸ್ಥಳಕ್ಕೆ ಮೂರು ತಂಡಗಳು ಆಗಮಿಸಿ, ಚಿರತೆಯನ್ನು ಸೆರೆ ಹಿಡಿಯಲು ಸತತ ಪ್ರಯತ್ನ ಮಾಡಲಾಗುತ್ತಿದೆ. ಆದರೆ ಇದುವರೆಗೆ ಚಿರತೆ ಕಾಣಿಸಿಕೊಂಡಿಲ್ಲ. ಆದರೆ ಅದರ ಗುರುತುಗಳು ಅಲ್ಲಲ್ಲಿ ಪತ್ತೆಯಾಗಿವೆ ಎಂದು ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ.

Share This Article
Leave a comment