ಮಂಡ್ಯ :
ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ನಿರಂತರ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಕಾವೇರಿ ಹೋರಾಟ ಮುಂದುವರಿಸಲು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ತೀರ್ಮಾನಿಸಿದೆ.
ನಗರದ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿ ಸ್ಥಳದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರು ನಿಲ್ಲಿಸುವ ಬಗ್ಗೆ ಸ್ವಷ್ಟ ನಿರ್ಧಾರ ಪ್ರಕಟಿಸದಿರುವುದು ಹಾಗೂ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರ ನೀರು ಹರಿಸುವಂತೆ ಮತ್ತೆ ಮತ್ತೆ ಆದೇಶ ಮಾಡಿರುವ ಕಾರಣ ಹೋರಾಟ ಮುಂದುವರಿಸಲು ನಿರ್ಧರಿಸಿತು.
ಸಮಿತಿಯ ಸುನಂದ ಜಯರಾಂ ಮಾತನಾಡಿ ತಮಿಳುನಾಡಿಗೆ ಪ್ರತಿನಿತ್ಯ 2600 ಕ್ಯೂ ಸೆಕ್ ನಂತೆ 15 ದಿನಗಳ ಕಾಲ ನೀರು ಬಿಡುವಂತೆ ಸಮಿತಿ ಶಿಫಾರಸು ಮಾಡಿರುವುದು ಮತ್ತು ಮುಖ್ಯಮಂತ್ರಿ ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರನ್ನು ನಿಲ್ಲಿಸುವ ಬಗ್ಗೆ ದಿಟ್ಟ ನಿಲುವು ತಾಳದ ಹಿನ್ನೆಲೆಯಲ್ಲಿ ಹೋರಾಟ ಮುಂದುವರಿಸಲಾಗುವುದು ಎಂದರು.
ಹೋರಾಟ ಮುಂದುವರಿಸುವ ಬಗ್ಗೆ ಯಾವುದೇ ಗೊಂದಲ ಇಲ್ಲ, ವ್ಯತ್ಯಾಸವು ಇಲ್ಲ, ನಿರಂತರ ಧರಣಿ ಮುಂದುವರೆಯಲಿದೆ, ಸರ್ಕಾರ ಯಾವ ರೀತಿ ಮುಂದುವರೆಯಲಿದೆ ಎಂಬುದು ಅವರಿಗೆ ಬಿಟ್ಟ ವಿಚಾರ ಕಾನೂನಾತ್ಮಕ ಹೋರಾಟವನ್ನು ಮಾಡಲಿ, ವಿಶೇಷ ಜಂಟಿ ಅಧಿವೇಶನ ಕರೆದು ಚರ್ಚೆ ಮಾಡಲಿ, ಸಂಸದರನ್ನು ಒಳಗೊಂಡಂತೆ ಮಮತದ ತೀರ್ಮಾನ ಕೈಗೊಳ್ಳಲಿ, ಒಳ್ಳೆಯದನ್ನು ನಿರೀಕ್ಷೆ ಮಾಡುತ್ತೇವೆ ಆದರೆ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಸ್ಥಗಿತ ಮಾಡಬೇಕೆಂಬುದು ನಮ್ಮ ಒತ್ತಡವಾಗಿದೆ ಎಂದರು.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ