ಶಿಸ್ತು ಬದ್ದ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

Team Newsnap
1 Min Read
  • ಕಾಂಗ್ರೆಸ್ ನಿಂದ ಸ್ಪರ್ಧಿಸಿ ಲೋಕಸಭೆಗೆ ಆಯ್ಕೆಯಾಗಿದ್ದರು

  • ಇಂದಿರಾಗಾಂಧಿ ಸ್ಪರ್ಧಿಸಲು ರಾಜೀನಾಮೆ ನೀಡಿ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದರು

  • ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಡಿ ಬಿ ಚಂದ್ರೇಗೌಡ


ಚಿಕ್ಕಮಗಳೂರು: 
ಮಾಜಿ ಸಚಿವ ಡಿ ಬಿ ಚಂದ್ರೇಗೌಡ (87 ) ಅವರು ತೀವ್ರ ಅನಾರೋಗ್ಯದಿಂದ ಕಳೆದ ರಾತ್ರಿ ದಾರದಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದರು.

ಮೂಡಿಗೆರೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ (ಬುಧವಾರ) ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ರಾಜಕೀಯದಲ್ಲಿ ಹೆಜ್ಜೆ ಗುರುತು :

ಬಿ ಎ ಎಲ್ ಎಲ್ ಬಿ ವ್ಯಾಸಂಗ ಮಾಡಿದ್ದ ಡಿ ಬಿ ಚಂದ್ರೇಗೌಡ, 1971 ಹಾಗೂ 1977 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಲೋಕಸಭಾ ಸದಸ್ಯರಾಗಿ ಅಯ್ಕೆಯಾಗಿದ್ದರು. ಇದಕ್ಕೂ ಮೊದಲು ಇಂದಿರಾ ಗಾಂಧಿ ಅವರು ಚಿಕ್ಕಮಗಳೂರಿನಿಂದ ಸ್ಪರ್ಧಿಸಲು ಮುಂದಾಗಿದ್ದರು. ಆ ವೇಳೆ ಕಾಂಗ್ರೆಸ್ ಪಕ್ಷದಲ್ಲಿದ್ದ ದಿ ಬಿ ಚಂದ್ರೇಗೌಡ ತಮ್ಮ ಕ್ಷೇತ್ರಕ್ಕೆ ರಾಜೀನಾಮೆ ನೀಡುವ ಮೂಲಕ ಇಂದಿರಾ ಗಾಂಧಿ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರು.

ಆ ಚುನಾವಣೆಯಲ್ಲಿ ಇಂದಿರಾಗಾಂಧಿ ಗೆಲುವು ಸಾಧಿಸಿದ್ದರು. ಇದಲ್ಲದೆ, ಜೀವನದ ಹೆಚ್ಚಿನ ಸಮಯವನ್ನು ರಾಜಕೀಯದಲ್ಲಿ ಕಳೆದಿದ್ದ ಚಂದ್ರೇಗೌಡರು ತೀರ್ಥಹಳ್ಳಿ ಹಾಗೂ ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.

Share This Article
Leave a comment