March 9, 2026

Newsnap Kannada

The World at your finger tips!

doc suicide

ಭ್ರೂಣ ಹತ್ಯೆಯಲ್ಲಿ ಕೈವಾಡ ಶಂಕೆ – ಮಂಡ್ಯ ಮೂಲದ ವೈದ್ಯ ಕುಶಾಲನಗರದಲ್ಲಿ ಆತ್ಮಹತ್ಯೆ

Spread the love

ಕುಶಾಲನಗರ : ಮೈಸೂರಿನ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಡಾ. ಸತೀಶ್ ಶುಕ್ರವಾರ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಕುಶಾಲನಗರ ತಾಲ್ಲೂಕಿನ ಆನೆಕಾಡು ಗ್ರಾಮದ ಬಳಿ, ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದಕಾರಿನಲ್ಲಿ ವೈದ್ಯ ಸತೀಶ್ ಚುಚ್ಚು ಮದ್ದಿನ ಮೂಲಕ ಆತ್ಮ ಹತ್ಯೆಮಾಡಿಕೊಂಡಿರುವ ಶಂಕೆ ಇದೆ .

ಡಾ ಸತೀಶ್(47) ಮಂಡ್ಯ ಜಿಲ್ಲೆ ಶಿವಳ್ಳಿ ಗ್ರಾಮದ ನಿವಾಸಿ. ಅಲ್ಲದೇ ಅದೇ ಗ್ರಾಮದಲ್ಲಿ ಖಾಸಗಿ ಕ್ಲೀನಿಕ್ ನಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದರು . ಇತ್ತೀಚಿಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿಬಂದಿತ್ತು.

ಇನ್ನು ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಅವರ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ಅವರು ತಲೆಮರೆಸಿಕೊಂಡಿದ್ದರು.

ರಾಜ್ಯ ಸರ್ಕಾರ ಈಗ ಭ್ರೂಣ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿದೆ. ಹೀಗಾಗಿ ತಾನು ಕೂಡ ಸಿಕ್ಕಿಬಿಳುವ ಭಯದಿಂದ ವೈದ್ಯ ಸತೀಶ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.ತಾತ್ಕಾಲಿಕ SSLC, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ವೈದ್ಯನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

error: Content is protected !!