ಬೆಂಗಳೂರು : ಮಂಡ್ಯ ಡಿಹೆಚ್‌ಒ ಡಾ. ಮೋಹನ್ ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಜರುಗಿದೆ .
ನಟರಾಜ್ ಆತ್ಮಹತ್ಯೆಗೆ ಶರಣಾದ ವೈದ್ಯ. ಮಂಡ್ಯ ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದು ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಹೃದಯಾಘಾತಕ್ಕೊಳಗಾದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ಇಂದು ಮಂಡ್ಯಗೆ ಹೋಗಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್‌ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.ಭ್ರೂಣ ಹತ್ಯೆ ಪ್ರಕರಣ: ಮೈಸೂರಿನ ಹಿಂದಿನ ಡಿಎಚ್ ಓ , ಈಗಿನ ಟಿಎಚ್ ಓ ಸಸ್ಪೆಂಡ್
ಬೆಟ್ಟಸ್ವಾಮಿ ಎಂಬ ಅಧಿಕಾರಿಯನ್ನು ಪಾಂಡವಪುರ ಟಿಹೆಚ್‌ಒ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಬೆಟ್ಟಸ್ವಾಮಿ ಪಾಂಡವಪುರದಲ್ಲಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಡಿಹೆಚ್‌ಒ ಬೆಟ್ಟಸ್ವಾಮಿ ಪರವಾಗಿ ಇದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ