ಬೆಂಗಳೂರು : ಮೈಸೂರು ದಸರಾದಲ್ಲಿ ಸತತ 8 ಬಾರಿ ಅಂಬಾರಿ ಹೊತ್ತಿದ್ದಂತ ಅರ್ಜುನ ಆನೆ ಕಾಡಾನೆ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಒಂಟಿ ಸಲಗದ ದಾಳಿಗೆ ಒಳಗಾಗಿ ಸಾವನ್ನಪ್ಪಿತ್ತು. ಹಾಸನದ ದಬ್ಬಳ್ಳಿಕಟ್ಟೆ ಬಳಿಯಲ್ಲೇ ಅಂತ್ಯಸಂಸ್ಕಾರ ನಡೆಸಲಾಗಿತ್ತು.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅರ್ಜುನ ಆನೆ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಾಣ ಮಡಲಾಗುವುದೆಂದು ಘೋಷಿಸಿದ್ಧಾರೆ.
ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ , ಮೈಸೂರಿನ ದಸರಾಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ತಿಳಿಸಿದ್ದರು.
ಅರ್ಜನನ ಸಾವು ನಾಡಿನಾದ್ಯಂತ ಇರುವ ಪ್ರಾಣಿ ಪ್ರಿಯರಿಗೆ ಮತ್ತು ಸಾರ್ವಜನಿಕರಿಗೆ ನೋವು ತಂದಿತ್ತು ಮತ್ತು ಸಕಲ ಸರ್ಕಾರಿ ಗೌರವಗಳೊಂದಿಗೆ ಅರ್ಜುನನಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು.Rocking Star ಯಶ್ ನಟನೆಯ ‘ಟಾಕ್ಸಿಕ್ ’ ಸಿನಿಮಾ ಟೈಟಲ್ ರಿಲೀಸ್
ಇದೀಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಆನೆ ಅರ್ಜುನ ಪ್ರಾಣ ಕಳೆದುಕೊಂಡ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸಲಾಗುವುದು ಮತ್ತು ಹೆಚ್.ಡಿ ಕೋಟೆಯಲ್ಲೂ ಸ್ಮಾರಕ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ .
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ