December 27, 2024

Newsnap Kannada

The World at your finger tips!

leelavathi

ಹಿರಿಯ ನಟಿ ಲೀಲಾವತಿ ಇನ್ನಿಲ್ಲ

Spread the love

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅವರು ವಿಧಿವಶರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಹಾಸಿಗೆ ಹಿಡಿದಿದ್ದರು. ಅವರನ್ನು ಇಂದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಅವರ ಅಂತ್ಯಕ್ರಿಯೆಯನ್ನು ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ನೇರವೇರಲಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿದ್ದು, ಬಳಿಕ ಅವರ ಅಂತ್ಯಕ್ರಿಯೆಯನ್ನು ನೇರವೇರಿಸಲಾಗುವುದು .

85 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.

ಲೀಲಾವತಿ ದಕ್ಷಿಣ ಭಾರತದ ನಟಿಯಾಗಿ ಗುರುತಿಸಿಕೊಂಡಿದ್ದರು. ಕನ್ನಡದಲ್ಲಿ ಪ್ರಧಾನವಾಗಿ ನಟಿಸುವುದರೊಂದಿಗೆ ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳ ಸುಮಾರು 600 ಚಿತ್ರಗಳಲ್ಲಿ ನಟಿಸಿದ್ದಾರೆ.

ಕರ್ನಾಟಕ ಸರ್ಕಾರ ಚಲನಚಿತ್ರರಂಗದ ಜೀವಮಾನ ಸಾಧನೆಗೆ ನೀಡುವ ಅತ್ತ್ಯುನ್ನತ ಪ್ರಶಸ್ತಿ ಡಾ. ರಾಜಕುಮಾರ್ ಪ್ರಶಸ್ತಿಯನ್ನು 1999-2000ನೇ ಸಾಲಿನಲ್ಲಿ ಪಡೆದ ಲೀಲಾವತಿ ಅವರು, ‘ತುಮಕೂರು ವಿಶ್ವವಿದ್ಯಾಲಯ’ದ ಗೌರವ ಡಾಕ್ಟರೇಟ್ ಪದವಿಯನ್ನು 2008ರಲ್ಲಿ ಪಡೆದಿದ್ದರು.

Copyright © All rights reserved Newsnap | Newsever by AF themes.
error: Content is protected !!