ನವದೆಹಲಿ: ಜಮ್ಮು-ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ .
ಈ ಕುರಿತಂತೆ ಪ್ರಶ್ನಿಸಿ ಸಲ್ಲಿಸಲಾಗಿದ್ದ 23 ಅರ್ಜಿಗಳ ಸಂಬಂಧ ಇಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಐತಿಹಾಸಿಕ ತೀರ್ಪನ್ನು ಓದಿದ ಸುಪ್ರೀಂಕೋರ್ಟ್ ಸಿಜೆಐ ಡಿವೈ ಚಂದ್ರಚೂಡ್ ಅವರು, ಸರ್ಕಾರದ ಆದೇಶವನ್ನು ನಾವು ಪ್ರಶ್ನೆ ಮಾಡಲು ಸಾಧ್ಯವಿಲ್ಲ. ಸಂಸತ್ ಮತ್ತು ರಾಷ್ಟ್ರಪತಿ ಈ ನಿರ್ಧಾರವನ್ನು ಕೈಗೊಳ್ಳಬಹುದು ಎಂದರು .
ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿರುವಾಗ ರಾಷ್ಟ್ರಪತಿಗಳ ಅಧಿಕಾರಕ್ಕೂ ಕೂಡ ಮಿತಿಗಳು ಇರುತ್ತದೆ. ರಾಷ್ಟ್ರಪತಿ ಕೈಗೊಳ್ಳುವ ನಿರ್ಧಾರಗಳು ನ್ಯಾಯಾಂಗದ ಪರಾಮರ್ಶಗೆ ಒಳಪಡಲಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ಈ ತೀರ್ಪು ನೀಡಿದೆ .ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ : ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಆ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಕುರಿತು ಇದ್ದ ಎಲ್ಲಾ ಗೊಂದಲಗಳಿಗೆ ಬಹುತೇಕ ತೆರೆ ಬಿದ್ದಂತಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ