ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡಿ ಎಂದು ಆಗ್ರಹಿಸಿದ್ದಾರೆ .
ಟಿಪ್ಪು ಮೊದಲ ಸ್ವಾತಂತ್ರ್ಯ ಹೋರಾಟಗಾರ , ಮೂರು ಬಾರಿ ಮೈಸೂರು ಆಂಗ್ಲೋ ಯುದ್ಧವನ್ನು ಮಾಡಿದವರು ಮತ್ತು ತಮ್ಮ ಮಗನನ್ನೇ ಒತ್ತೆ ಇಟ್ಟ ಇತಿಹಾಸವಿದೆ. ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು , ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು , ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು ಮತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕವಿ ಕುವೆಂಪು ಹೆಸರು ಇಡುವಂತೆ ಸಚಿವ ಎಂ.ಬಿ ಪಾಟೀಲ್ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ .
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಿ ಎಂದು ಕಾರ್ಕಳ ಬಿಜೆಪಿ ಶಾಸಕ ಸುನಿಲ್ ಕುಮಾರ್ ಮನವಿ ಮಾಡಿದ್ಧಾರೆ . ವೀರ ರಾಣಿ ಅಬ್ಬಕ್ಕ ದೇವಿ ಹೆಸರೂ ಕೂಡ ಕೇಳಿ ಬರುತ್ತಿದೆ ಎಂದು ಸ್ಪೀಕರ್ ಯು ಟಿ ಖಾದರ್ ಹೇಳಿದರು.
ಹೆಸರಿಡುವ ವಿಚಾರಕ್ಕೆ ವಾಗ್ವಾದ ಉಂಟಾಗಿದ್ದು, ಮಂಗಳೂರು, ಮೈಸೂರು ಕೂಡ ಇದೆ. ಈ ಬಗ್ಗೆ ಎಂ.ಬಿ ಪಾಟೀಲ್ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ .ಡಿಆರ್‌ಡಿಒ ಯುವ ವಿಜ್ಞಾನಿ ಆತ್ಮಹತ್ಯೆ
ಟ್ವೀಟ್ ಮೂಲಕ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಮೈಸೂರಿನ ವಿಮಾನ ನಿಲ್ದಾಣಕ್ಕೆ ಶ್ರೀ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ಹೇಳಿದ್ದಾರೆ.
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು