December 22, 2024

Newsnap Kannada

The World at your finger tips!

atal bihari vajapayi

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ: ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ

Spread the love

ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಮಾಜಿ ಪ್ರಧಾನಿ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇಂದು ವಾಜಪೇಯಿ ಅವರನ್ನು ಸ್ಮರಿಸಿಕೊಂಡಿದ್ದಾರೆ.

atal 1

ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಸೇರಿದಂತೆ ಹಲವು ಗಣ್ಯರು ಅಟಲ್ ಜೀಯವರಿಗೆ ಗೌರವ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ, ಮುರ್ಮು, ಧನ್ಕರ್ ಸೇರಿದಂತೆ ಹಲವರು ‘ಸದೈವ್ ಅಟಲ್’ ಸಮಾಧಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದ್ದಾರೆ.

ವಾಜಪೇಯಿ ಅವರು ಡಿಸೆಂಬರ್ 25, 1924 ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಜನಿಸಿದರು ಮತ್ತು ಮೂರು ಬಾರಿ ರಾಷ್ಟ್ರದ ಪ್ರಧಾನಿಯಾಗಿ ಸೇವೆ ಸಲ್ಲಿದ್ದಾರೆ. ವಿರೋಧ ಪಕ್ಷಗಳಿಂದ ಅಜಾತ ಶತ್ರು ಎಂಬ ಪದವಿಯನ್ನು ಕೂಡ ಪಡೆದರು.

ಅಟಲ್ ಜೀ ಅವರ ಜನ್ಮದಿನದಂದು ದೇಶದ ಎಲ್ಲಾ ಕುಟುಂಬ ಸದಸ್ಯರ ಪರವಾಗಿ ನಾನು ಅವರಿಗೆ ನಮಿಸುತ್ತೇನೆ. ಅಟಲ್ ಜೀ ಅವರು ತಮ್ಮ ಜೀವನದುದ್ದಕ್ಕೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತಲ್ಲೀನರಾಗಿದ್ದರು. ಭಾರತ ಮಾತೆಗೆ ಅವರು ನೀಡಿರುವ ಸಮರ್ಪಣಾ ಸೇವೆಯೇ ಇಂದು ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಮೋದಿಯವರು ಬರೆದುಕೊಂಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!