ಪ್ರಧಾನಿ ಮೋದಿ ಅವರು ಇಂದು ‘ಅಯೋಧ್ಯಾ ಧಾಮ್’ ರೈಲ್ವೇ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಮತ್ತು ರಾಜ್ಯಪಾಲ ಆನಂದಿಬೆನ್ ಪಟೇಲ್ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ 15 ಕಿ.ಮೀ ಮೆಗಾ ರೋಡ್ ಶೋ ನಡೆಸಿದ್ದಾರೆ. ರೋಡ್ ಶೋ ಬಳಿಕ ಪ್ರಧಾನಿ ಮೋದಿ ಅಯೋಧ್ಯಾ ಧಾಮ್’ ರೈಲ್ವೇ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ. ನಂತರ ಪ್ರಧಾನಿ ಮೋದಿ ರೈಲ್ವೇ ನಿಲ್ದಾಣವನ್ನು ವೀಕ್ಷಿಸಿ ರೈಲ್ವೇ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದರು.
ಮೋದಿ ಬರುವ ದಾರಿಯಲ್ಲಿ ನಿರ್ಮಿಸಲಾಗಿದ್ದ ಸುಮಾರು 40 ವೇದಿಕೆಗಳಲ್ಲಿ 1,400ಕ್ಕೂ ಹೆಚ್ಚು ಕಲಾವಿದರು ವಿವಿಧ ಸಾಂಸ್ಕೃತಿಕ ನೃತ್ಯಗಳಿಗೆ ಹೆಜ್ಜೆ ಹಾಕಿದರು. ಅಲ್ಲದೇ ಮೋದಿ ಅವರ ಬರುವಿಕೆಗಾಗಿ ಕಾದು ಕುಳಿತಿದ್ದ ಜನರು ರೋಡ್‌ಶೋ ಹಾದಿಯುದ್ಧಕ್ಕೂ ವಿವಿಧ ಹೂಗಳಿಂದ ಮೋದಿಗೆ ಪುಷ್ಪಾರ್ಚನೆ ಮಾಡಿ ಜಯಘೋಷ ಹಾಕಿದರು.
ರೈಲು ನಿಲ್ದಾಣ ಅಭಿವೃದ್ಧಿಗೆ 3 ಪ್ಲಾಟ್ ಫಾರಂಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಲಾಗಿದೆ. 3 ಅಂತಸ್ತಿನ ಕಟ್ಟಡ, ಲಿಫ್ಟ್, ಎಸ್ಕಲೇಟರ್, ಮಕ್ಕಳ ಆರೈಕೆ ಕೊಠಡಿ, ಫುಡ್ ಪ್ಲಾಜಾ, ಪೂಜಾ ಪರಿಕರ ಅಂಗಡಿಗಳಿವೆ. 2ನೇ ಹಂತದಲ್ಲಿ 480 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯಲಿದೆ.
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
- ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
- ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
- ಪ್ರತಿ ಗ್ರಾ.ಪಂ ಅಭಿವೃದ್ಧಿಗೆ 8-9 ಕೋಟಿ ರೂ. ಅನುದಾನ: ಸಚಿವ ಮಧು ಬಂಗಾರಪ್ಪ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ