- ಇಂಡಿಯಾ ಒಕ್ಕೂಟದ ಮಹತ್ವದ ಸಭೆಯಲ್ಲಿಸಿಎಂ ನಿತೀಶ್ ಕುಮಾರ್ I.N.D.I.Aಗೆ ಸಂಚಾಲಕ
- ಇವತ್ತಿನ ಸಭೆಗೆ ಮಮತಾ ಬ್ಯಾನರ್ಜಿ ಗೈರು
ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ್ ಖರ್ಗೆ ಅವರನ್ನು I.N.D.I.A. ಒಕ್ಕೂಟದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಿ ನೇಮಕ ಮಾಡಲಾಗಿದೆ.
ಇಂಡಿಯಾ ಒಕ್ಕೂಟದ ಈ ನಿರ್ಧಾರಕ್ಕೆ ಮಿತ್ರ ಪಕ್ಷಗಳ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ.
ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ 14 ಪಕ್ಷಗಳ ನಾಯಕರ ಸಮ್ಮುಖದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಲೋಕಸಭೆ ಚುನಾವಣೆ ಸಂಬಂಧ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇವತ್ತಿನ ಸಭೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೈರಾಗಿದ್ದರು.
ಇನ್ನು ನಿತೀಶ್ ಕುಮಾರ್ ಅವರನ್ನು ಸಂಚಾಲಕರನ್ನಾಗಿ ನೇಮಿಸಲು ಜನತಾದಳ (United) ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಕೊನೆಗೂ ನಿತೀಶ್ ಕುಮಾರ್ ಸಂಚಾಲಕರಾಗಿ ಒಪ್ಪಿಕೊಂಡಿದ್ದಾರೆ .CCB Raid – ಬೆಂಗಳೂರು ರೇಸ್‌ಕೊರ್ಸ್ ಬುಕ್ಕಿಂಗ್ ಕೌಂಟರ್‌ನಿಂದ 3.47 ಕೋಟಿ ರೂ. ಸೀಜ್
ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ವಿಚಾರದಲ್ಲಿ ಟಿಎಂಸಿ ಕೆಲವು ಚಕಾರ ಎತ್ತಿದೆ. ಹೀಗಾಗಿ ಇವತ್ತಿನ ಸಭೆಗೆ ಮಮತಾ ದೀದಿ ಹಾಜರಾಗಿಲ್ಲ ಎಂದು ಹೇಳಲಾಗಿದೆ.
More Stories
ಲೋಕಾಯುಕ್ತ ಬಲೆಗೆ ಬಿದ್ದ ನಗರಸಭೆ ಆಯುಕ್ತ ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್
ಕೊಡಗಿನಲ್ಲಿ ನಿರ್ಮಾಣಗೊಳ್ಳಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು