ಬೆಂಗಳೂರು : ಮುಂದಿನ ದಿನಗಳಲ್ಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.
ನಿನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಅಶ್ವತ್ಥ್ ನಾರಾಯಣ್ ,ಡಿಕೆಶಿ ಸಿಎಂ ಆಗಬೇಕು ಎಂದಿರುವುದು ಅಚ್ಚರಿ ಮೂಡಿಸಿದ್ದಾರೆ.
‘ಮನೆ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಸಮಾರಂಭದಲ್ಲಿ ಭಾಷಣ ಮಾಡಿದ ಅಶ್ವತ್ಥ್ ನಾರಾಯಣ, ‘ನಿಮಗೆ ಒಳ್ಳೆಯದಾಗಲಿ, ಇನ್ನೂ ಉನ್ನತ ಸ್ಥಾನಕ್ಕೆ ಹೋಗುವಂತಾಗಲಿ. ನಾಡಿನ ಜನ ಅವಕಾಶ ಕೊಟ್ಟಿದ್ದಾರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಯೂ ಆಗಲಿ’ ಎಂದು ಡಿಕೆ ಶಿವಕುಮಾರ್ ಅವರಿಗೆ ಹಾರೈಸಿದ್ದಾರೆ.
ಡಿ ಕೆ ಶಿವಕುಮಾರ್ ಮತ್ತು ಅಶ್ವತ್ಥ ನಾರಾಯಣ್ ಇಬ್ಬರೂ ಪ್ರಬಲ ಒಕ್ಕಲಿಗ ಸಮುದಾಯದವರು .
ಪಾದಚಾರಿಗಳು, ವೃದ್ಧರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪಾದಚಾರಿ ಮಾರ್ಗಗಳನ್ನು ತೆರವುಗೊಳಿಸುವ ಮೂಲಕ ಸರ್ಕಾರವು ಉತ್ತಮ ಕೆಲಸ ಮಾಡುತ್ತಿದೆ.ಡಿಕೆ ಶಿವಕುಮಾರ್ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಅಶ್ವತ್ಥ ನಾರಾಯಣ ಹೊಗಳಿದ್ದಾರೆ.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು