ಕಲಬುರಗಿ : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಕಲಬುರಗಿ (Kalaburagi) ಜಿಲ್ಲೆಗೆ ಆಗಮಿಸಿದ್ದಾರೆ .
ರಾಜ್ಯ ಸರ್ಕಾರದ ಪರವಾಗಿ ಸಚಿವ ಶರಣಪ್ರಕಾಶ್ ಪಾಟೀಲ್ , ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ (Kalaburagi Airport) ಆಗಮಿಸಿದ ಪ್ರಧಾನಿಗೆ ಸ್ವಾಗತ ಕೋರಿದ್ದಾರೆ.
ಕೇಂದ್ರ ಸಚಿವ ಭಗವಂತ ಖುಬಾ, ಸಂಸದ ಉಮೇಶ್ ಜಾಧವ್, ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್, ಪರಿಷತ್ ಸದಸ್ಯ ಬಿ.ಜಿ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷರು ಪ್ರಮುಖ ನಾಯಕರು ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ರಾಜಧಾನಿಯಲ್ಲಿ ಭಾರೀ ಭದ್ರತೆ :
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (KIAL), ಬೇಗೂರು, ಮೈಲನಹಳ್ಳಿ, ಬಿಐಇಟಿಸಿ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ,ಇಡೀ ರಸ್ತೆಯನ್ನು ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ತಪಾಸಣೆ ನಡೆಸಲಾಗಿದೆ.
ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ ಮಧ್ಯಾಹ್ನ 2.45ರ ವೇಳೆಗೆ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸೆಂಟರ್ (ಬಿಐಇಟಿಸಿ) ಉದ್ಘಾಟಿಸಲಿದ್ದಾರೆ.ಮದ್ದೂರು : ವೈದ್ಯರ ಮನೆಗೆ ಕನ್ನ ಹಾಕಿ ಲಕ್ಷಾಂತರ ರು ನಗ, ನಾಣ್ಯ ದೋಚಿದ ಕಳ್ಳರು
ಮೋದಿ ಅವರಿಂದ ಬೀದರ್‌ನ ಎಫ್ ಎಂ ಕೇಂದ್ರ ಉದ್ಘಾಟನೆ :
ಇಂದು (ಜ.19) ಸಂಜೆ 5 ಗಂಟೆ ವೇಳೆಗೆ ವರ್ಚುವಲ್ ಮೂಲಕ ಬೀದರ್‌ನ ನೂತನ ಎಫ್.ಎಂ ಕೇಂದ್ರವನ್ನು ಮೋದಿ ಅವರು ಉದ್ಘಾಟಿಸಲಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ