ಯುವತಿಯರನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ನಲ್ಲಿ ತೊಡಗಿದ್ದ ಐವರನ್ನು ಮೈಸೂರಿನ ಕುವೆಂಪು ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಶ್ರೀಮಂತ ವ್ಯಕ್ತಿಗಳು. ಸುಲಭದಲ್ಲಿ ಹಣ ಗಳಿಸಲು ಈ ದಂಧೆಗೆ ಇಳಿದಿದ್ದ ನವೀನ್, ಶಿವರಾಜು, ಹರೀಶ್, ಅನಿತಾ, ವಿಜಿ ಬಂಧಿತರು. ಬಂಧಿತರೆಲ್ಲರೂ ಪಿರಿಯಾಪಟ್ಟಣ ಮೂಲದವರಾಗಿದ್ದಾರೆ.
ಬಂಧಿತರು ಸಾಮಾಜಿಕ ತಾಣಗಳನ್ನು ಬಳಸಿಕೊಂಡು ಸುಂದರ ಯುವತಿಯರ ಮೂಲಕ ಶ್ರೀಮಂತ ಯುವಕರನ್ನು ಸಂಪರ್ಕಿಸುತ್ತಿದ್ದರು. ನಂತರ ಅವರನ್ನು ಮನೆಗೆ ಕರೆಸಿಕೊಂಡು ಲೈಂಗಿಕ ಸಂಪರ್ಕದ ವೇಳೆ ಹಿಡನ್ ಕ್ಯಾಮೆರಾದ ಮೂಲಕ ಗೌಪ್ಯ ವಿಡಿಯೋ ರೆಕಾರ್ಡಿಂಗ್ ಮಾಡಿಟ್ಟುಕೊಳ್ಳುತ್ತಿದ್ದರು. ನಂತರ ಇದನ್ನು ಬಳಸಿ ಅವರಿಂದ ಲಕ್ಷಗಟ್ಟಲೆ ಹಣ ವಸೂಲಿ ಮಾಡುತ್ತಿದ್ದರು.
ಗೌರವ ಮರ್ಯಾದೆಗೆ ಅಂಜಿ ಶ್ರೀಮಂತರು ಹಣ ನೀಡುತ್ತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಇವರು ಮೈಸೂರು ಮಾತ್ರವಲ್ಲದೆ ಹೊರ ಜಿಲ್ಲೆಗಳಲ್ಲಿಯೂ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸುತ್ತಿದ್ದರು. ಇವರ ಜಾಲಕ್ಕೆ ಸಿಲುಕಿ ಕಿರುಕುಳ ತಾಳಲಾರದ ವ್ಯಕ್ತಿಯೊಬ್ಬರು ಕುವೆಂಪು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ವ್ಯಕ್ತಿಯ ವಿಡಿಯೋ ಇಟ್ಟುಕೊಂಡು ಆರೋಪಿಗಳು 31 ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆ.
ಮೊಕದ್ದಮೆ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಬಂಧನಕ್ಕೆ ಡಿಸಿಪಿ ಡಾ.ಎ.ಎನ್.ಪ್ರಕಾಶ್ ಗೌಡ ಮಾರ್ಗದರ್ಶನದಲ್ಲಿ ತಂಡ ರಚಿಸಿದ್ದರು. ಇದೀಗ ಹೈಪ್ರೊಫೈಲ್ ವ್ಯಕ್ತಿಗಳು ಸೇರಿದಂತೆ ಹಲವರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ ಅವರ ಪತ್ತೆಗೆ ಬಲೆ ಬೀಸಲಾಗಿದೆ.
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
- ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
- ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ
- ರಾಜ್ಯದ ಹಲವೆಡೆ ಲೋಕಾಯುಕ್ತದಿಂದ ದಾಳಿ – ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಪರಿಶೀಲನೆ
- ತಂದೆಯಾದ ಅಭಿಷೇಕ್: ಮರಿ ರೆಬಲ್ ಸ್ಟಾರ್ ಗೆ ಜನ್ಮ ನೀಡಿದ ಅವಿವಾ
More Stories
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ಚನ್ನಪಟ್ಟಣ ನಗರಸಭೆ ಆಯುಕ್ತ ನಾಗೇಶ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ