ನವದೆಹಲಿ : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭೆ ಸದಸ್ಯರಾದ ಹೆಚ್ ಡಿ ದೇವೇಗೌಡರು ಕರ್ನಾಟಕದಲ್ಲಿ ಆಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ.
ದೇವೇಗೌಡರು ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿ , ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಬೆಳಕಿಗೆ ತಂದಿದ್ದಾರೆ.
ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ದೇವೇಗೌಡರು , ಕೇಂದ್ರ ಸರಕಾರವು 30 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಸಂಸತ್ ನಲ್ಲಿ ಕೈ ಮುಗಿದು ಮನವಿ ಮಾಡಿದ್ದಾರೆ.
ತಮಿಳುನಾಡಿನ ಪರ ಸುಪ್ರೀಂ ಕೋರ್ಟ್ʼನಲ್ಲಿ ಸುಪ್ರೀಂ ಕೋರ್ಟ್ʼನಲ್ಲಿ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಮಾನ್ಯ ಪ್ರಧಾನಿಗಳು ದಯಮಾಡಿ ಮಧ್ಯಪ್ರವೇಶ ಮಾಡಬೇಕು, ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಎಲ್ಲರಿಗೂ ಇದು ನನ್ನ ಪ್ರಾರ್ಥನೆ ಎಂದು ಕೈ ಜೋಡಿಸಿ ಮನವಿ ಮಾಡಿಕೊಂಡರು.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಕರ್ನಾಟಕವೂ ಸೇರಿದಂತೆ ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ಎಲ್ಲೆಡೆ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನನಗೆ ಅರಿವಿದೆ. ಮುಖ್ಯಮಂತ್ರಿ ಆಗಿದ್ದ ನನಗೆ ,ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಮ್ಮ ಸ್ವಾರ್ಥ ಮತ್ತು ಸ್ವಹಿತಕ್ಕಾಗಿ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಚನ್ನಾಗಿ ಗೊತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಹೇಳಿದರು.
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ