ದಾವಣಗೆರೆ : ಸುಮಾರು 34 ಲಕ್ಷ ರೈತರಿಗೆ ತಾತ್ಕಾಲಿಕ ಬರ ಪರಿಹಾರವಾಗಿ ಒಬ್ಬ ರೈತನಿಗೆ ತಲಾ 2,000 ದಂತೆ 650 ಕೋಟಿ ರೂ. ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ,ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿದ್ದಾರೆ, ಹಾಗಾದರೆ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ ವಿರೋಧಿಸುವುದು ತಪ್ಪೇ? ಎಂದು ಕಿಡಿ ಕಾರಿದ್ದಾರೆ.
ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ.ನಾವು 100 ರೂ. ಕಟ್ಟಿದರೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ. ರಾಜ್ಯದಿಂದ ₹4,30,000 ಕೋಟಿ ತೆರಿಗೆ ಸಂಗ್ರಹವಾದರೆ, ನಮಗೆ 50,257 ಕೋಟಿ ರೂ.ಮಾತ್ರ ಮರಳಿ ಬರುತ್ತಿದೆ. ಕೇಂದ್ರದ ಈ ಧೋರಣೆಯನ್ನು ವಿರೋಧಿಸುತ್ತೇವೆ ಎಂದರು.
ಬರನಿರ್ವಹಣೆ ಸಂಬಂಧ ಕುಡಿಯುವ ನೀರು, ಮೇವು, ಉದ್ಯೋಗ ನೀಡಲಾಗುತ್ತಿದ್ದು, ಒಟ್ಟು 860 ಕೋಟಿ ರೂ.ಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಸ್ಪಷ್ಟ ನಿರ್ದೇಶನ ನೀಡಲಾಗಿದೆ.
ಒಬ್ಬ ರೈತನಿಗೆ ತಾತ್ಕಾಲಿಕ ಪರಿಹಾರವಾಗಿ ತಲಾ 2,000 ದಂತೆ ಸುಮಾರು 34 ಲಕ್ಷ ರೈತರಿಗೆ 650 ಕೋಟಿ ರೂ. ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಐದು ತಿಂಗಳು ಕಳೆದರೂ ಬರಪರಿಹಾರ ನೀಡಿಲ್ಲ.ಯಾವುದೇ ನಿವೇಶನಗಳನ್ನು ಪೌರಕಾರ್ಮಿಕರಿಗೆ ನೀಡುತ್ತಿಲ್ಲ- BBMP ಸ್ಪಷ್ಟನೆ
ರಾಜ್ಯದ ಬಿಜೆಪಿ ನಾಯಕರು ಕೇವಲ ಭಾಷಣ ಮಾಡುತ್ತಾರೆಯೇ ಹೊರತು, ಕೇಂದ್ರದೊಂದಿಗೆ ಸಂವಹನ ನಡೆಸಿ ಪರಿಹಾರ ದೊರಕಿಸಿ ಕೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು