ಬೆಂಗಳೂರು : 12-02-2024 ರಿಂದ 23-02-2024 ರವರೆಗೆ ವಿಧಾನಸಭೆ ಅಧಿವೇಶನ ನಡೆಯುವ ಹಿನ್ನೆಲೆ ,ಪ್ರತಿದಿನ ಬೆಳಿಗ್ಗೆ 06-00 ಗಂಟೆಯಿಂದ ಮಧ್ಯರಾತ್ರಿ 12-00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ವಿಧಾನಸೌಧ ಕಟ್ಟಡದ ಸುತ್ತಲೂ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಇದನ್ನು ಓದಿ –6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ
ಆದೇಶಗಳು ಈ ಕೆಳಗಿನಂತಿವೆ :
- 5 ಅಥವಾ ಅದಕ್ಕಿಂತ ಹೆಚ್ಚು ಜನರು ಕಾನೂನುಭಂಗ ಉಂಟು ಮಾಡುವ ಉದ್ದೇಶದಿಂದ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
- ಸಭೆ ಮತ್ತು ಮೆರವಣಿಗೆ ಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ.
- , ಕತ್ತಿಗಳು, ಈಟಿಗಳು, ಶಸ್ತ್ರಗಳನ್ನು, ದೊಣ್ಣೆಗಳನ್ನು , ಗದೆಗಳು, ಕಲ್ಲು, ಇಟ್ಟಿಗೆ, ಚಾಕು ಇನ್ನೂ ಮುಂತಾದ ಮಾರಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ.
- ಸ್ಪೋಟಕ ವಸ್ತುಗಳನ್ನು ಸಿಡಿಸುವುದು ಅಥವಾ ಉಪಕರಣಗಳ ಸಾಗಾಟ ಮತ್ತು ಶೇಖರಿಸುವುದನ್ನು ನಿಷೇಧಿಸಲಾಗಿದೆ.
- ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದು ,5. ಸಂಗೀತ ನುಡಿಸುವುದು. ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿ ಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಧ ಮಾಡಲಾಗಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ