ಮೈಸೂರು : ಇಂದು ಮೈಸೂರಿಗೆ ಭೇಟಿ ನೀಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರು , ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿದ್ದು , ಮೈತ್ರಿ ಧರ್ಮ ಪಾಲಿಸುವಂತೆ ನಾಯಕರಿಗೆ ಸೂಚನೆ ನೀಡಿದ್ದಾರೆ.
ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಸಭೆ ನಡೆಸಿ , ಯಾವ ಕ್ಷೇತ್ರ ಯಾರಿಗೆ ಎಂಬುದನ್ನು ನಾವು ತೀರ್ಮಾನ ಮಾಡುತ್ತೆವೆ ಎಂದು ತಿಳಿಸಿದರು.
ಮೈತ್ರಿ ಧರ್ಮಕ್ಕೆ ಚೂರು ಧಕ್ಕೆಯಾದರೂ ನಾವು ಸಹಿಸುವುದಿಲ್ಲ. ಅಮಿತ್ ಶಾ ಅವರು ಸೀಟು ಹಂಚಿಕೆ ಬಗ್ಗೆ ಮಾತಾಡುವವರಿಗೆ ವಾರ್ನಿಂಗ್ ನೀಡಿ , ಮೈತ್ರಿ ಧರ್ಮ ಪಾಲನೆ ಬಗ್ಗೆ ಕಠಿಣ ಪಾಠ ಹೇಳಿದ್ದಾರೆ.ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರ; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದ ನಿಖಿಲ್ ಕುಮಾರಸ್ವಾಮಿ
ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತೆ ಪ್ರಮುಖ ನಾಯಕರಿಗೆ ಮೈಸೂರು ಕ್ಷೇತ್ರದ ಬಗ್ಗೆ ಹೆಚ್ಚಿನ ಗಮನ ಇರಲಿ , ನಿರ್ಲಕ್ಷ್ಯ ಮಾಡಬೇಡಿ ಎಂದು ಸೂಚಿಸಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ