ಬೆಂಗಳೂರು : ಈ ಹಿಂದೆ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಶಾಸಕ ಪ್ರದೀಪ ಈಶ್ವರ್ ಏಕವಚನದಲ್ಲಿ ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ಅಯೋಗ್ಯ ಎಂದು ವಾಗ್ದಾಳಿ ನಡೆಸಿದ್ದು ,ಸಂಸದ ಪ್ರತಾಪ್ ಸಿಂಹ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ.
ಕಳೆದ ತಿಂಗಳು ಚಿಕ್ಕಬಳ್ಳಾಪುರದ ಅಲಗುರ್ಕಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ ಶಂಕು ಸ್ಥಾಪನೆಯ ವೇಳೆ, ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ , ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸುಮ್ಮನಿದ್ದರೆ ಸರಿ ,ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ ಎಂಬ ವಿಚಾರವಾಗಿ ಸಂಸದ ಪ್ರತಾಪ್ ಸಿಂಹ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸಿದ್ದಾರೆ.
ಈ ವಿಷಯ ಕುರಿತು ಮಾತನಾಡಿದ ತಾಪ್ ಸಿಂಹ ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಮುಠಾಳ, ಅಯೋಗ್ಯ ಎಂಬಿತ್ಯಾದಿ ನಿಂದನತ್ಮಾಕ ಶಬ್ದಗಳಿಂದ ತೇಜೋವಧ ಮಾಡಲು ಪ್ರಯತ್ನಿಸಿದ್ದಾರೆ.
ಸಾರ್ವಜನಿಕ ಜೀವನದಲ್ಲಿ ಜನರಿಗೆ ನನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಲು ದಾರಿಮಾಡಿ , ಕನಿಷ್ಠ ಸೌಜನ್ಯವನ್ನು ಕೂಡ ತೋರದ ಚಾರಿತ್ರ್ಯ ವಧೆ ಮಾಡುವ ಮಾತುಗಳನ್ನು ಆಡಿದ್ದಾರೆ.ಮಂಡ್ಯ -‘ಆಸ್ತಿ ವಿಚಾರ’ವಾಗಿ ಮಗನಿಂದಲೇ ‘ತಂದೆ’ಯ ಹತ್ಯೆ
ಪ್ರತಾಪ್ ಸಿಂಹ ಅವರು ನನ್ನನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಖಾಸಗಿ ದೂರು ಸಲ್ಲಿಸಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ