ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ( ಸ್ಟಾರ್ ಚಂದ್ರು ) ನಾಮಪತ್ರ ಸಲ್ಲಿಸಿದರು.
ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜನ ಸಾಗರದ ಜೊತೆಯಲ್ಲೇ ನಗರದ ಶಕ್ತಿ ದೇವತೆ ಶ್ರೀ ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಸ್ಟಾರ್ ಚಂದ್ರು ಬೃಹತ್ ಮೆರವಣಿಗೆ ಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಕುಮಾರ್ ಅವರಿಗೆ ಕಾಂಗ್ರೆಸ್ ಪಕ್ಷದ ಸಚಿವರು,ಶಾಸಕರು ಮತ್ತು ಮುಖಂಡರ ಜೊತೆಗೂಡಿ ಉಮೇದುವಾರಿಕೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಶಾಸಕರಾದ ಪಿಎಂ ನರೇಂದ್ರಸ್ವಾಮಿ,ಕದಲೂರು ಉದಯ್,ಮುಖಂಡರಾದ ದಡದಪುರ ಶಿವಣ್ಣ ಇದ್ದರು
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೀಗೌಡ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮಿ ಭೇಟಿಯಾಗಿ ಆಶೀರ್ವಾದ ಪಡೆದು ಮಂಡ್ಯಕ್ಕೆ ಆಗಮಿಸಿದರು, ನಗರದ ವಿದ್ಯಾಗಣಪತಿ ದೇವಸ್ಥಾನಕ್ಕೆ ತೆರಳಿ ವಿಘ್ನೇಶ್ವರನಿಗೆ ಪ್ರಥಮ ಪೂಜೆ ಸಲ್ಲಿಸಿ ನಂತರ ಅರ್ಕೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಬಳಿಕ ಶ್ರೀ ಜನಾರ್ಧನಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಜಿಲ್ಲೆಯ ವಿವಿದೆಡೆಯಿಂದ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗಿದ ಅಭ್ಯರ್ಥಿ ಸ್ಟಾರ್ ಚಂದ್ರುರಿಗೆ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ರಾಜ್ಯ ಸಭೆಯ ಸದಸ್ಯ ಜಿ.ಸಿ ಚಂದ್ರಶೇಖರ್, ಶಾಸಕರಾದ ಪಿ.ಎಂ ನರೇಂದ್ರಸ್ವಾಮಿ,ಕದಲೂರು ಉದಯ್, ರವಿಕುಮಾರ್ ಗಣಿಗ, ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ, ಶರತ್ ಬಚ್ಚೇಗೌಡ, ರಮೇಶ್ ಬಾಬು ಬಂಡಿಸಿದ್ದೇಗೌಡ, ಸುನೀತಾ ಪುಟ್ಟಣ್ಣಯ್ಯ, ದಿನೇಶ್ ಗೂಳಿಗೌಡ,ಮರಿತಿಬ್ಬೇಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಥ್ ನೀಡಿದರು. ವಾರ್ತಾ ಇಲಾಖೆ ಆಯುಕ್ತ ನಿಂಬಾಳ್ಕರ್ ವರ್ಗಾವಣೆ : ವಿಕಾಸ ಸುರಳ್ಕರ ನೂತನ ಆಯುಕ್ತ
ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿ ಹೊರಬಂದ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಭ ಹಾರೈಸಿದರು, ಇದೇ ವೇಳೆ ನೆರೆದಿದ್ದ ಜನಸ್ತೋಮ ಉದ್ದೇಶಿಸಿ ಉಪಮುಖ್ಯಮಂತ್ರಿ ಸೇರಿದಂತೆ ಹಲವರು ಮಾತನಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಮೂಲಕ ಮಂಡ್ಯ ಜಿಲ್ಲೆಯ ಸ್ವಾಭಿಮಾನ ಕಾಪಾಡುವಂತೆ ಮನವಿ ಮಾಡಿದರು.
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ