March 13, 2026

Newsnap Kannada

The World at your finger tips!

baby

ಸಾವು ಗೆದ್ದು ಬಂದ ಸಾತ್ವಿಕ್; 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ..!

Spread the love

ವಿಜಯಪುರ : ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್​​ನನ್ನು 20 ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ NDRF, SDRF ತಂಡಗಳು ನಿನ್ನೆಯಿಂದಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಸಾತ್ವಿಕ್​ನನ್ನು ಹೊರಗೆ ತೆಗಿದಿದ್ದಾರೆ.

ಯಶಸ್ವಿ ಕಾರ್ಯಾಚರಣೆಯಿಂದಾಗಿ ಮಗುವಿನ ಪೋಷಕರು, ಸಂಬಂಧಿಗಳು ಹಾಗೂ ಗ್ರಾಮಸ್ಥರೆಲ್ಲರೂ ಸಂಭ್ರಮಿಸಿದರು.

ಸತತ 20 ಗಂಟೆಯಿಂದಲೂ ಕಾರ್ಯಾಚರಣೆ ಮಾಡಿ ಮಗುವನ್ನ ಹೊರ ತೆಗೆದಿರುವ ಸ್ವತಃ ಅಧಿಕಾರಿಗಳ ತಂಡ ಖುಷಿ ಕೂಡ ಹೇಳತೀರದಾಗಿದೆ. ಮಗುವನ್ನು ಕಾಪಾಡಿದ್ದು ನಮಗೆ ತುಂಬಾ ಆನಂದವನ್ನು ನೀಡುತ್ತಿದೆ ಎಂದು ಸಿಬ್ಬಂದಿಗಳು ಹೇಳಿದರು.ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ `ನಾಮಪತ್ರ’ ಸಲ್ಲಿಕೆ

ಭೂಮಿಯನ್ನು ಅಗೆಯುವ ವೇಳೆ ಕಲ್ಲು ಬಂಡೆ ಅಡ್ಡಿಯಾಗಿದ್ರಿಂದ ರಕ್ಷಣಾ ಕಾರ್ಯದಲ್ಲಿ ಕೊಂಚ ವಿಳಂಬವಾಗಿತ್ತು. ಅದು ಬಿಟ್ಟರೇ ಎಲ್ಲ ಕಾರ್ಯ ಚೆನ್ನಾಗಿ ನಡೆದಿದೆ.

error: Content is protected !!