ಮಂಡ್ಯ : ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸತ್ ಸದಸ್ಯರಾಗಿ ಆಯ್ಕೆ ಮಾಡಿದರೆ ಬಹಳ ವರ್ಷಗಳ ನಂತರ ಮಂಡ್ಯಕ್ಕೆ ಕೇಂದ್ರ ಸಚಿವ ಸ್ಥಾನ ಸಿಗುವ ಅವಕಾಶವಿದೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು.
ಮಂಡ್ಯದ ವಕೀಲರ ಸಂಘದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಚ್.ಡಿ.ಕುಮಾರಸ್ವಾಮಿ ಅವರ ಪರ ವಕೀಲರ ಬಳಿ ಮತಯಾಚನೆ ಮಾಡಿ ಮಾತನಾಡಿದ ಸುರೇಶ್ ಕುಮಾರ್ ವಕೀಲರು ತಮ್ಮದೇ ಆದ ಪ್ರಭಾವಶಾಲಿ ಇಟ್ಟುಕೊಂಡಿದ್ದೇವೆ, ಚಿಂತನಶಕ್ತಿ ಇದೆ, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬಹುಮತದಿಂದ ಆಯ್ಕೆ ಮಾಡಲು ಸಹಕರಿಸಬೇಕು ಎಂದು ಕೋರಿದರು.
ಜನಸಾಮಾನ್ಯರ ಹಿತಕ್ಕೆ ಇರುವ ಗ್ಯಾರಂಟಿ ನರೇಂದ್ರ ಮೋದಿ ಗ್ಯಾರಂಟಿ ರಾಷ್ಟ್ರೀಯ ಹಿತ ದೃಷ್ಟಿಯಿಂದ ಈ ಚುನಾವಣೆ ಮಹತ್ವವಾದ ಚುನಾವಣೆಯಾಗಿದೆ ಎಂದು ಹೇಳಿದರು.
ದೇಶದ ಹಿತ ದೃಷ್ಟಿಯಿಂದ ನಿರ್ಣಾಯಕ ಹೆಜ್ಜೆ ಇಡುವ ನಾಯಕ ಇದ್ದಾನೆ ಎಂದರೆ ಅದು ಮೋದಿ. ಎಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿ ಆಗಿ ಗ್ರಾಮ ವಾಸ್ತವ್ಯದ ಮೂಲಕ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದ್ದಾರೆ ಎಂದು ಹೇಳಿದರು.ಮಂಡ್ಯದಲ್ಲಿ ಐಸ್‌ಕ್ರೀಂ ತಿಂದು ಅವಳಿ ಮಕ್ಕಳು ಸಾವು
ಜೆಡಿಎಸ್ ರಾಜ್ಯಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್, ಉಪಾಧ್ಯಕ್ಷ ಕೆ.ಎಂ.ಬಸವರಾಜು ,ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್.ರಘು ನಂದನ್, ಸಿದ್ದರಾಜು, ಮಹೇಶ್ ಇತರರಿದ್ದರು.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ