November 21, 2024

Newsnap Kannada

The World at your finger tips!

teacher, learning, school

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

Spread the love

ಬೆಂಗಳೂರು : ಮೇ 10ರಂದು – ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು ತೆಗೆದುಕೊಂಡಿದ್ದು ,ನಿರೀಕ್ಷೆಯಂತೆ ಮೇ 10ರಂದು ಫಲಿತಾಂಶ ಪ್ರಕಟಿಸಲಾಗುವುದು.

2024ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು , 4.41 ಲಕ್ಷ ಬಾಲಕರು 4.28 ಲಕ್ಷ ಬಾಲಕಿಯರು ಸೇರಿದ್ದಾರೆ.

ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು 41,375 ರೀ ಎಕ್ಸಾಮ್‌ ಬರೆದಿದ್ದ ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ.

ವಿದ್ಯಾರ್ಥಿಗಳು ಎಸ್‌ಎಸ್‌ಎಲ್ಸಿ ಫಲಿತಾಂಶ ನೋಡಲು ಮೊದಲಿಗೆ ತಮ್ಮ ರಿಜಿಸ್ಟರ್‌ ನಂಬರ್‌ / ರೋಲ್‌ ನಂಬರ್‌ ಹೊಂದಿರಬೇಕು.

ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್‌ ನಂಬರ್‌ (ನೋಂದಣಿ ಸಂಖ್ಯೆ) ಮೂಲಕವೇ ಕರ್ನಾಟಕ ಶಾಲೆ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ನೋಡಬಹುದು.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಮೇ 10 ರಂದು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ ಆಗಲಿದ್ದು , kseab.karnataka.gov.in ಗೆ ಭೇಟಿ ನೀಡಬಹುದು.

Copyright © All rights reserved Newsnap | Newsever by AF themes.
error: Content is protected !!