February 18, 2026

Newsnap Kannada

The World at your finger tips!

heart attack , kid , death

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

Spread the love

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗೋವಿಂದಪ್ಪ ಸಿದ್ದಾಪುರ ಎಂಬುವರು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಾಗಲಕೋಟೆ ಜಿಲ್ಲೆಯ ಮುಧೋಳದ ಬಸ್ ನಿಲ್ದಾಣದ ಬಳಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಬಿದರಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ಗೋವಿಂದಪ್ಪ ಸಿದ್ದಾಪುರ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಚುನಾವಣಾ ಕರ್ತವ್ಯಕ್ಕೆ ಮೈಗೂರು ಪ್ರಾಥಮಿಕ ಶಾಲೆಯ ಮತಗಟ್ಟೆಗೆ ತೆರಳುತ್ತಿದ್ದಾಗ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

error: Content is protected !!