ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್ ರೇವಣ್ಣ ಅಷ್ಟೇ ಅಲ್ಲ. ಹಲವು ರಾಜಕಾರಣಿಗಳ ವಿಡಿಯೋಗಳಿವೆ , ಬರುವ ದಿನಗಳಲ್ಲಿ ಹೊರಬರಲಿದೆಎಂದು ಎಂದು ಕೆ ಎಸ್ ಈಶ್ವರಪ್ಪ ದೂರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ,ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ತನಿಖೆ ನಡೆಸಲು ರಚಿಸಲಾದ ವಿಶೇಷ ತನಿಖಾ ತಂಡ ಸ್ವತಂತ್ರವಾಗಿ ಮತ್ತು ನಿಷ್ಪಕ್ಷಪಾತತನದಿಂದ ತನಿಖೆ ನಡೆಸಲಿದ್ದು, ಇದರಲ್ಲಿ ರಾಜ್ಯ ಸರ್ಕಾರ ಒಂದು ಸೂಜಿಯ ಮೊನೆಯಷ್ಟೂ ಮಧ್ಯಪ್ರವೇಶ ಮಾಡುವುದಿಲ್ಲ.
ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಈ ಪ್ರಕರಣದಿಂದಾಗಿ ಹಾಳಾಗುತ್ತಿದೆ ಎಂದು ಬಿಜೆಪಿ ನಾಯಕರು ಈಗ ಗೋಳಾಡುವುದರಿಂದ ಏನೂ ಪ್ರಯೋಜನವಾಗದು, ಜೆಡಿ(ಎಸ್) ಜೊತೆ ಮೈತ್ರಿ ಮಾಡಿಕೊಡುವಾಗಲೇ ಇದನ್ನು ಯೋಚನೆ ಮಾಡಬೇಕಾಗಿತ್ತು.
ಈಗ ಎಸ್‌ಐಟಿ ತನಿಖೆಯ ಯಶಸ್ಸು ಸಂಪೂರ್ಣವಾಗಿ ಕೇಂದ್ರ ಸರ್ಕಾರ ನೀಡುವ ಸಹಕಾರವನ್ನು ಅವಲಂಬಿಸಿದೆ.
ಭಾರತಕ್ಕೆ ಪ್ರಜ್ವಲ್ ರೇವಣ್ಣನವರನ್ನು ಕರೆತರಲು ಸಹಕಾರ ನೀಡಬೇಕಾಗಿರುವುದು ಕೇಂದ್ರ ಸರ್ಕಾರ.ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
ಈಗಲೂ ಜೆಡಿಎಸ್ ಜೊತೆ ರಾಜಕೀಯ ಮೈತ್ರಿ ಹೊಂದಿರುವ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಾಗಿದೆ.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ