February 18, 2026

Newsnap Kannada

The World at your finger tips!

HD Revanna

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

Spread the love
  • ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು
  • ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು
  • ಎದೆ ಉರಿ ಕಾಣಿಸಿಕೊಂಡ ಹಿನ್ನೆಲೆ ಹೆಚ್‌.ಡಿ ರೇವಣ್ಣ ವಿಕ್ಟೊರಿಯಾ ಆಸ್ಪತ್ರೆಗೆ ಶಿಫ್ಟ್

ಬೆಂಗಳೂರು : ಅಶ್ಲೀಲ ವಿಡಿಯೋ ಹಾಗೂ ಮಹಿಳೆಯ ಕಿಡ್ನಾಪ್‌ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರಿಗೆ ಆರೋಗ್ಯದ ಸಮಸ್ಯೆ ಎದುರಾಗಿದೆ.

ಎಸ್‌ಐಟಿ ವಶದಲ್ಲಿರುವ ಹೆಚ್‌.ಡಿ ರೇವಣ್ಣ ಅವರನ್ನು ಅಧಿಕಾರಿಗಳು ಮೆಡಿಕಲ್ ಟೆಸ್ಟ್‌ಗೆ ಕರೆದುಕೊಂಡು ಹೋಗಿದ್ದಾರೆ.

ಹೆಚ್‌.ಡಿ ರೇವಣ್ಣ ಅವರು ಮಧ್ಯಾಹ್ನದಿಂದ ಹೊಟ್ಟೆ ಉರಿ ಹಾಗೂ ಎದೆನೋವು ಎನ್ನುತ್ತಿದ್ದರು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಿದ್ದರು.

ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿದ ಬಳಿಕ ರೇವಣ್ಣ ಅವರಿಗೆ ಎದೆ ಉರಿ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆ ವಿಕ್ಟೊರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಚ್‌.ಡಿ ರೇವಣ್ಣ ಅವರಿಗೆ ಎಸ್‌ಐಟಿ ಅಧಿಕಾರಿಗಳು ನುರಿತ ವೈದ್ಯರಿಂದ ಮತ್ತೊಂದು ಸುತ್ತಿನ ಚಿಕಿತ್ಸೆ ನೀಡುತ್ತಿದ್ದಾರೆ. ಡಾಕ್ಟರ್ ಟೆಸ್ಟಿಂಗ್ ಮಾಡಿದ ಬಳಿಕ ಹೆಚ್‌.ಡಿ ರೇವಣ್ಣ ಅವರನ್ನು ಅಡ್ಮಿಟ್ ಮಾಡಬೇಕಾ? ಬೇಡ್ವಾ ಎನ್ನುವುದರ ಬಗ್ಗೆ ಅಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ

ಹೆಚ್‌.ಡಿ ರೇವಣ್ಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿರುವುದರಿಂದ ಆಸ್ಪತ್ರೆಯ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಜಯನಗರ ಎಸಿಪಿ‌ ನಾರಾಯಣಸ್ವಾಮಿ, ವಿವಿಪುರಂ ಎಸಿಪಿ ಶಾಮಿದ್ ಬಾಷಾ ನೇತೃತ್ವದಲ್ಲಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚುವರಿ ಬ್ಯಾರಿಕೇಡ್ ತರಿಸಿದ್ದಾರೆ.

error: Content is protected !!