ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಮತ್ತು ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
‘ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಿದ್ಧಪಡಿಸಿದ ವರದಿಯನ್ನು ಸಚಿವರು, ಮುಖ್ಯಮಂತ್ರಿಯವರ ಮುಂದಿಡುವರು. ಪೋಷಕರು, ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ನೀಡಿದ ಅಭಿಪ್ರಾಯಗಳು ಈ ವರದಿಯಲ್ಲಿವೆ’ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
ಇಲಾಖೆಯ ಆಯುಕ್ತ ಅನ್ಬುಕುಮಾರ್, ಡಿಸೆಂಬರ್ ಎರಡನೇ ವಾರದಿಂದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ–ಕಾಲೇಜು ಪ್ರಾರಂಭಿಸಬಹುದು ಎಂದು ನ.9ರಂದು ಶಿಫಾರಸು ಮಾಡಿದ್ದರು.
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
- ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ
- ಕಾಪರ್ ಏಜ್ ಇನ್ಸ್ಟಿಟ್ಯೂಟ್ ಮಾಲೀಕ ಶರತ್ ಆತ್ಮಹತ್ಯೆ: ಕಾರಣ ನಿಗೂಢ
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ