ಬೆಂಗಳೂರು :ಬರೋಬ್ಬರಿ 1 ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷರಾಗಿದ್ದು, ವಿದೇಶದಲ್ಲಿ ಕುಳಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ.
ಅವರು ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿಗೆ ಬಂದು ಎಸ್‌ಐಟಿ (SIT) ಮುಂದೆ ಹಾಜರಾಗಿ ಉತ್ತರ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರು ಮತ್ತು ರಾಜ್ಯದ ಜನತೆಯಲ್ಲಿ ಪ್ರಜ್ವಲ್ ರೇವಣ್ಣ ಕ್ಷಮೆ ಕೇಳಿದ್ದಾರೆ.
ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿದ್ದೇನು..?
ಎಲ್ಲರಿಗೂ ನಮಸ್ಕಾರಗಳು ಮೊದಲಿಗೆ ನಾನು ನನ್ನ ತಾತ, ತಂದೆ-ತಾಯಿ, ಜೆಡಿಎಸ್ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಎಲ್ಲಿದ್ದೇನೆ ಎಂದು ಮಾಹಿತಿ ನೀಡಲು ಬಂದಿದ್ದೇನೆ, ನಾನು ಎಲ್ಲಿ ಕೂಡ ಓಡಿ ಹೋಗಿಲ್ಲ. ನಾನು ವಿದೇಶದಲ್ಲಿದ್ದಾಗ ಯೂಟ್ಯೂಬ್ ನ್ಯೂಸ್ ನೋಡಿ ನನ್ನ ಮೇಲೆ ಗಂಭೀರ ಆರೋಪ ಬಂದಿರುವುದು ಕಂಡುಬಂದಿದೆ. ಇದಾದ ನಂತರ ನನ್ನ ಹೆಸರನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ.
ಎಸ್‌ಐಟಿ ನೋಟಿಸ್ ನೀಡಿದ ವಿಚಾರ ಗೊತ್ತಾಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ಮೇಲೆ ಪಿತೂರಿ ಮಾಡಿದ್ದಾರೆ. ಮೇ 31 ರಂದು ಬೆಳಗ್ಗೆ 10 ಗಂಟೆಗೆ ನಾನು ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ.
ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರ ಆರೋಪದಿಂದ ನಾನು ಮಾನಸಿಕ ಖಿನ್ನತೆಗೆ ಜಾರಿದ್ದೆ , ಈ ಖಿನ್ನತೆಯಿಂದ ಹೊರ ಬರದಲು ನನಗೆಸಮಯ ಬೇಕಿತ್ತು.ಚನ್ನಗಿರಿ ‘ಲಾಕಪ್ ಡೆತ್’ ಪ್ರಕರಣ : DYSP ಸೇರಿ 3 ಪೊಲೀಸ್ ಅಧಿಕಾರಿಗಳು ಅಮಾನತು
ನ್ಯಾಯಾಲಯದ ಮೇಲೆ ನನಗೆ ನಂಬಿಕೆಯಿದೆ ,ಈ ಸುಳ್ಳು ಪ್ರಕರಣದಿಂದ ನಾನು ಹೊರ ಬಂದ ಮೇಲೆ ಎಲ್ಲರಿಗೂ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ