ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ

Team Newsnap
1 Min Read

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು, ಇದೀಗ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ವರ್ಗಾವಣೆ ಮಾಡಲಾಗಿದೆ.

ಇಂದು ಎಸ್‍ಐಟಿ (SIT) ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು , ಈ ವೇಳೆ ಎಸ್‍ಐಟಿ ಅಧಿಕಾರಿಗಳು ನ್ಯಾಯಾಧೀಶರ ಬಳಿ ಮತ್ತೆ ಕಸ್ಟಡಿಗೆ ಕೇಳದ ಕಾರಣ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಅವರನ್ನು ಒಪ್ಪಿಸಿ ನಂತರ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ ಮಾಡಲಾಗಿದೆ.

ಹೊಳೆನರಸೀಪುರದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಇನ್ನೂ ಎರಡು ಪ್ರಕರಣಗಳ ತನಿಖೆ ಬಾಕಿ ಹಿನ್ನೆಲೆ ಪುನಃ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ .ವಿಚ್ಛೇದನದ ಬಗ್ಗೆ ಸ್ಪಷ್ಟನೆ ನೀಡಿದ ಚಂದನ್ ಶೆಟ್ಟಿ

ಎಸ್‍ಐಟಿ ಒಂದು ಪ್ರಕರಣದ ತನಿಖೆಯನ್ನು ಬಹುತೇಕವಾಗಿ ಪೂರ್ಣಗೊಳಿಸಿದ್ದು, ಮುಂದಿನ 2 ಪ್ರಕರಣಗಳ ತನಿಖೆ ಪ್ರತ್ಯೇಕವಾಗಿ ಶುರು ಮಾಡಲಿದೆ.

Share This Article
Leave a comment