ಐಎಂಎ ಪ್ರಕರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಕೊಂಡು ವಿಚಾರಣೆಯ ನಂತರ ಈ ರಾತ್ರಿ ಬಂಧಿಸಿದರು. ನಂತರ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆಯಿಂದ ರೋಷನ್ ಬೇಗ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು.
400 ಕೋಟಿ ರು ಲಂಚ?
ಐಎಂಎ ಮಾಲೀಕ ಮನ್ಸೂರ್ ಖಾನ್ ಈ ಹಿಂದೆ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದ ವಿಡಿಯೋದಲ್ಲಿ ಪ್ರಕರಣ ಮುಚ್ಚಿ ಹಾಕಲು ರೋಷನ್ ಬೇಗ್ ತನ್ನಿಂದ 400 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ ಅಂತಾ ಆರೋಪಿಸಿದ್ದ. ಈ ಆರೋಪದಲ್ಲಿ ಸತ್ಯಾಂಶ ಇದೆಯೇ ಎಂಬುದನ್ನು ಅರಿಯಲು ಬೇಗ್ ವಿಚಾರಣೆಗೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.
ಆಡಿಯೋ ರಿಲೀಸ್ ಮಾಡಿದ್ದ ಮನ್ಸೂರ್
ಮನ್ಸೂರ್ ಖಾನ್ ದಿನಾಂಕ 9/06/2019 ಆಡಿಯೋ ಒಂದನ್ನು ಬಿಡುಗಡೆ ಮಾಡಿದ್ದ. ಈ ಆಡಿಯೋದಲ್ಲಿ ರೋಷನ್ ಬೇಗ್ ಅವರಿಗೆ 400 ಕೋಟಿ ರೂಪಾಯಿಗಳಷ್ಟು ಹಣ ನೀಡಿದ್ದೆ. ಹಣ ವಾಪಾಸ್ ನೀಡಲು ಕೇಳಿದಾಗ ಲೋಕಲ್ ರೌಡಿಗಳನ್ನು ಬಿಟ್ಟು ಮನ್ಸೂರ್ ಖಾನ್ಗೆ ಜೀವ ಬೆದರಿಕೆ ಹಾಕಿಸಿದ್ದಾರೆ ಅಂತಾ ಆರೋಪಿಸಿದ್ದ ಎನ್ನಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು