February 18, 2026

Newsnap Kannada

The World at your finger tips!

accident 1 rotated

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ – ಇಬ್ಬರು ವಿದ್ಯಾರ್ಥಿಗಳಳು ದುರ್ಮರಣ

Spread the love

ರಾಮನಗರ : ತಡರಾತ್ರಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು , ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.

ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ (Lorry) ಹಿಂಭಾಗದಿಂದ ಡಿಕ್ಕಿ ಹೊಡೆದಿದ್ದು , ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿಆಂಧ್ರ ಮೂಲದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದು ,ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ.ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಲ್ಲ : ಸಿಎಂ ಸಿದ್ದರಾಮಯ್ಯ

ರಾಮನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!