February 18, 2026

Newsnap Kannada

The World at your finger tips!

nikhil rotated

ರಾಮನಗರ ಪ್ರತಿಭಟನೆ :ನಿಖಿಲ್ ಹಾಗೂ ಪೊಲೀಸರ ಮಧ್ಯೆ ಮಾತಿನ ಚಕುಮುಕಿ

Spread the love

ರಾಮನಗರ : ರಾಮನಗರದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿರುವ ವೇಳೆ ಕುಮಾರಸ್ವಾಮಿಯವರನ್ನು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕುಮುಕಿ ನಡೆದಿದ್ದು, ಪೊಲೀಸರ ವಿರುದ್ಧ ನಿಖಿಲ್ ಗರಂ ಆಗಿದ್ದಾರೆ.

ಜೆಡಿಎಸ್‍ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ (JDS) ಹಾಗೂ ಬಿಜೆಪಿಯವರು ಪ್ರತಿಭಟನೆ ನಡೆಯುತ್ತಿದ್ದರು.

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಮುಂದೂಡಿಕೆ ಮಾಡಿದ್ದಾರೆ. ಎರಡು ಬಾರಿ ಚುನಾವಣೆ ನಿಗಧಿಯಾಗಿದ್ರೂ ಅಧಿಕಾರಿಗಳು ಚುನಾವಣೆ ನಡೆಸಿಲ್ಲ ಎಂದು ಬಿಜೆಪಿ ಹಾಗೂ ಜೆಡಿಎಸ್ ಆರೋಪಿಸಿ ,ಈ ವಿಚಾರವಾಗಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೈತ್ರಿ ಪಕ್ಷದ ಕಾರ್ಯಕರ್ತರು ಸಹಕಾರ ಸಂಘಗಳ ನಿಬಂಧಕರ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದ್ದರು.

ಪ್ರತಿಭಟನಾಕಾರರು ಈ ವೇಳೆ ಕಂದಾಯ ಭವನಕ್ಕೆ ಮುತ್ತಿಗೆ ಹಾಕಿದ್ದು ,ಬಳಿಕ ಸಹಕಾರ ಸಂಘಗಳ ನಿಬಂಧಕರ ಕಚೇರಿಗೆ ಬೀಗ ಜಡಿಯಲು ಯತ್ನಿಸಿದ್ದಾರೆ.ಹುಟ್ಟುಹಬ್ಬದ ದಿನವೇ ವಿದ್ಯಾರ್ಥಿನಿಯೊಬ್ಬಳು ಅಪಘಾತಕ್ಕೆ ಬಲಿ

ಪೊಲೀಸರು ಈ ವೇಳೆ ಪ್ರತಿಭಟನಾಕಾರರನ್ನು ತಡೆದಿದ್ದು, ಪೊಲೀಸರು ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ವಾಗ್ವಾದ ನಡೆದಿದೆ.

error: Content is protected !!