February 19, 2026

Newsnap Kannada

The World at your finger tips!

siddaramiah

ಮುಡಾ ಪ್ರಕರಣದ ತನಿಖೆಯನ್ನು ‘CBI’ ಗೆ ವಹಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ

Spread the love

ಬೆಂಗಳೂರು : ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮುಡಾ ಹಗರಣದ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ನಿರಾಕರಿಸಿ ,ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಪ್ರಕರಣ ಸಿಬಿಐಗೆ ವಹಿಸುವ ವಿಚಾರ‌ವಾಗಿ ಪ್ರತಿಕ್ರಿಯಿಸಿದ ಅವರು, ನಮ್ಮ ಪೊಲೀಸರನೇ ಸಮರ್ಥರಿಲ್ಲವಾ? ಎಲ್ಲದಕ್ಕೂ ಸಿಬಿಐ ಸಿಬಿಐ ಅನ್ನುವ ಬಿಜೆಪಿ ತಮ್ಮ ಅವಧಿಯಲ್ಲಿ ಎಷ್ಟು ಕೇಸ್​​​ಗಳನ್ನು ಸಿಬಿಐಗೆ ಕೊಟ್ಟಿದ್ದಾರೆ ಹೇಳಿ?

ನಮ್ಮ ಪೊಲೀಸರು ತನಿಖೆ ವಿಚಾರದಲ್ಲಿ ಸಮರ್ಥರಿದ್ದಾರೆ. ಮುಡಾ ಹಗರವನ್ನ ಸಿಬಿಐಗೆ ವಹಿಸುವುದಿಲ್ಲ ಎಂದು ಸಿಎಂ ತಿಳಿಸಿದ್ದಾರೆ.ಜಾಮಿಯಾ ಮಸೀದಿ ವಿವಾದ : ನಾಳೆ ಹೈಕೋರ್ಟ್‌ನಲ್ಲಿ ವಿಚಾರಣೆ

ಮುಡಾದಲ್ಲಿ 50:50 ರದ್ದಾಗಿದ್ದು ,ನನ್ನ ಹೆಂಡತಿಯ ವಿಚಾರವನ್ನು ವಿವಾದ ಮಾಡುತ್ತಿದ್ದಾರೆ. ನಾನು ವಿಜಯನಗರದಲ್ಲಿ ಸೈಟ್ ಕೊಡಿ ಎಂದು ಕೇಳಿಲ್ಲ.ನಮ್ಮ ಜಮೀನಿನನ್ನು ನಿಯಮಬಾಹಿರವಾಗಿ ಭೂಸ್ವಾಧೀನ ಮಾಡಿಕೊಂಡಿದ್ದು ,ಅದಕ್ಕೆ ಅವರೇ ತಪ್ಪಾಯಿತು ಎಂದು ಹೇಳಿ ಸೈಟ್ ಕೊಟ್ಟಿದ್ದಾರೆ ಎಂದು ಹೇಳಿದರು.

error: Content is protected !!