December 19, 2024

Newsnap Kannada

The World at your finger tips!

accidentt

ಭೀಕರ ಸರಣಿ ಅಪಘಾತ ; ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ

Spread the love

ಬೆಂಗಳೂರು : ನಿಂತಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದ್ದು , ಓರ್ವ ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದೆ ಬರುತ್ತಿದ್ದ ಎರಡು ಕಾರುಗಳು ಕೂಡ ಡಿಕ್ಕಿಯಾಗಿ ಸರಣಿ ಅಪಘಾತ ಉಂಟಾಗಿದೆ.

ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.ಮುಂದಿನ 5 ದಿನ ರಾಜ್ಯಾದ್ಯಂತ ಭಾರೀ ಮಳೆಯ ಸಾಧ್ಯತೆ

ಸ್ಥಳೀಯ ಖಾಸಗಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಕೂಡಲೇ ದಾಖಲಿಸಲಾಗಿದ್ದು ,ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Copyright © All rights reserved Newsnap | Newsever by AF themes.
error: Content is protected !!