ಮಂಡ್ಯ: ಸೋಮವಾರ ತಡರಾತ್ರಿ ಅನಾರೋಗ್ಯದಿಂದ ಬಳಲುತ್ತಿದ್ದ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವರ ತಂದೆ ಪಿ.ಎಸ್.ಮಲ್ಲಯ್ಯ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.
ಮಲ್ಲಯ್ಯ (93) ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ,ಈ ಹಿನ್ನೆಲೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು.
ಇದೀಗ ಚಿಕಿತ್ಸೆ ಫಲಿಸದೇ ಮಲ್ಲಯ್ಯ ಅವರು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
ಮಲ್ಲಯ್ಯ ತಾಲೂಕು ಬೋರ್ಡ್ ಸದಸ್ಯರಾಗಿ, ಪುರಿಗಾಲಿ ಗ್ರಾ.ಪಂ, ಹಾಲು ಉತ್ಪಾದಕರ ಸಂಘ, ಪ್ರಾಥಮಿಕ ಕೃಷಿ ಪರಿಷತ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಬೆಂಗಳೂರಿನಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಶರಣು
ಇಂದು ಮಧ್ಯಾಹ್ನ 3 ಗಂಟೆಯ ವೇಳೆಗೆ ಹುಟ್ಟೂರು ಪುರಿಗಾಲಿಯಲ್ಲಿ ಮಲ್ಲಯ್ಯರ ಅಂತ್ಯಕ್ರಿಯೆ ನಡೆಯಲಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು