ಬಾಂಗ್ಲಾದೇಶದಲ್ಲಿ ಹಿಂಸಾಚಾರ : 440 ಕ್ಕೆ ಏರಿದ ಸಾವಿನ ಸಂಖ್ಯೆ

Team Newsnap
1 Min Read

ನವದೆಹಲಿ : ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನುಸ್ ಅವರನ್ನು ನೇಮಕ ಮಾಡುತ್ತಿದ್ದಂತೆ, ಅವಾಮಿ ಲೀಗ್ ನಾಯಕನ ಒಡೆತನದ ಹೋಟೆಲ್ ನಲ್ಲಿ ಕನಿಷ್ಠ 24 ಜನರನ್ನು ಜೀವಂತವಾಗಿ ಸುಟ್ಟುಹಾಕಲಾಗಿದೆ.

ಶೇಖ್ ಹಸೀನಾ ದೇಶದಿಂದ ಪಲಾಯನ ಮಾಡಿದ ನಂತರ ದೇಶದ ಅನೇಕ ಭಾಗಗಳಲ್ಲಿ ನಡೆದ ಹಿಂಸಾಚಾರದ ಘಟನೆಗಳಲ್ಲಿ ರಾತ್ರೋರಾತ್ರಿ 100 ಕ್ಕೂ ಹೆಚ್ಚು ಸಾವುಗಳು ವರದಿಯಾಗಿದ್ದು , ಇದರೊಂದಿಗೆ ಬಾಂಗ್ಲಾದೇಶದಲ್ಲಿ ಸಾವಿನ ಸಂಖ್ಯೆ 440 ಕ್ಕೆ ಏರಿಕೆಯಾಗಿದೆ.

ಹಲವಾರು ಹಿಂದೂ ದೇವಾಲಯಗಳು, ಮನೆಗಳು ಮತ್ತು ವ್ಯವಹಾರಗಳನ್ನು ಧ್ವಂಸಗೊಳಿಸಲಾಗಿದ್ದು ,ಮಹಿಳೆಯರ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಹಸೀನಾ ನೇತೃತ್ವದ ಅವಾಮಿ ಲೀಗ್ ಪಕ್ಷಕ್ಕೆ ಸೇರಿದ ಕನಿಷ್ಠ ಇಬ್ಬರು ಹಿಂದೂ ನಾಯಕರು ಸಾವನ್ನಪ್ಪಿದ್ದಾರೆ ಎಂದು ಢಾಕಾದ ಮುಖಂಡರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಮಿಲಿಟರಿ ವಿಮಾನದಲ್ಲಿ ಹಸೀನಾ ದೆಹಲಿ ಬಳಿಯ ಹಿಂಡನ್ ವಾಯುನೆಲೆಗೆ ಬಂದಿಳಿದಿದ್ದು, ಮುಂದಿನ ಎರಡು ದಿನಗಳವರೆಗೆ ಆಕೆಯನ್ನು ಬಿಗಿ ಭದ್ರತೆಯಲ್ಲಿ ಅನಿರ್ದಿಷ್ಟ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಮುಂದಿನ 5 ದಿನ ರಾಜ್ಯಾದ್ಯಂತ ಮಳೆಯ ಮುನ್ಸೂಚನೆ

ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿ ಪ್ರತಿಭಟನೆಯ ನಂತರ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಎನ್ಪಿ ಮತ್ತು ಜಮಾತ್-ಎ-ಇಸ್ಲಾಮಿಯ ಹಲವಾರು ಉನ್ನತ ನಾಯಕರು ಸೇರಿದಂತೆ ಒಟ್ಟು 2,400 ಜನರಿಗೆ ಜಾಮೀನು ನೀಡಲಾಗಿದೆ.

Share This Article
Leave a comment